ಬೆಂಗಳೂರು : 66ನೇ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆ ವಿಧಾನಸೌಧಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿದೆ.
ವಿದ್ಯುತ್ ದೀಪಾಲಂಕಾರದಿಂದ ಕಣ್ಮನ ಸೆಳೆಯುತ್ತಿದೆ ವಿಧಾನಸೌಧ.. ನಾಳೆ ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಕೆಂಪು ಹಾಗೂ ಹಳದಿ ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇಂದು ಮತ್ತು ನಾಳೆ ದೀಪಗಳಿಂದ ಕಂಗೊಳಿಸಲಿದೆ. ಕಟ್ಟಡದ ಸುತ್ತಲೂ ಕನ್ನಡದ ಬಾವುಟಗಳು ರಾರಾಜಿಸುತ್ತಿವೆ.
ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಬೆಳಗ್ಗೆ 9 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟನೆ ಮಾಡಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹಾಗೂ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿದ್ಯುತ್ ದೀಪಾಲಂಕಾರದಿಂದ ಕಣ್ಮನ ಸೆಳೆಯುತ್ತಿದೆ ವಿಧಾನಸೌಧ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 66 ಪ್ರಶಸ್ತಿ ಪುರಸ್ಕೃತರಿಗೆ ಮುಖ್ಯಮಂತ್ರಿಗಳು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿಂದು 292 ಮಂದಿಗೆ ಕೋವಿಡ್ : 11 ಸೋಂಕಿತರ ಸಾವು..