ಬೆಂಗಳೂರು:ಕೋವಿಡ್-19 ವೈರಾಣು ದೇಶದಾದ್ಯಂತ ವ್ಯಾಪಕವಾಗಿ ಹರಡಿದ ಹಿನ್ನೆಲೆ, ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ, ವಿದ್ಯಾಗಮ ಕಾರ್ಯಕ್ರಮದ ಪುನರ್ ಆರಂಭದ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗಿದೆ.
ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯವರು ನೀಡಿರುವ ಶಿಫಾರಸುಗಳು:
- ವಿದ್ಯಾಗಮ ಯೋಜನೆಯನ್ನ 6-9 ತರಗತಿಗೆ ಆರಂಭಿಸುವುದು. ಇದರ ಅನುಭವದ ಆಧಾರದ ಮೇಲೆ ಜನವರಿ 14 ನಂತರ 1 ರಿಂದ 5ನೇ
ತರಗತಿಗಳಿಗೆ ವಿದ್ಯಾಗಮ ಪ್ರಾರಂಭಿಸಬಹುದು.
- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳು ಹೊರಡಿಸುವ ಶಿಷ್ಟಾಚಾರಗಳನ್ನು ಪಾಲಿಸುವುದು.
- ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಅನುಮತಿ ಪತ್ರದಲ್ಲಿ ಮಗುವಿಗೆ ಯಾವುದೇ ಕೋವಿಡ್ ಲಕ್ಷಣಗಳಿರುವುದಿಲ್ಲ ಎಂಬುದನ್ನು ದೃಢೀಕರಿಸಬೇಕು.
- ಸೋಂಕಿನ ಗುಣವುಳ್ಳ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗೆ ಪರೀಕ್ಷೆಯನ್ನು ಮಾಡಿಸುವಂತೆ ಸಲಹೆ ನೀಡಲಾಗಿದೆ. ಅವರು ಹತ್ತಿರದ ಆಸ್ಪತ್ರೆ /ಆರೋಗ್ಯ ಕೇಂದ್ರವನ್ನು
ಸಂಪರ್ಕ ಮಾಡಿ ಸಮನ್ವಯ ಸಾಧಿಸುವುದು.