ಕರ್ನಾಟಕ

karnataka

ETV Bharat / state

ನಾಳೆ ಕೇಂದ್ರದ ಹೊಸ ಮಾರ್ಗಸೂಚಿ ಪ್ರಕಟ: ಡಿಸಿಗಳ ಜತೆ ವಿಜಯ ಭಾಸ್ಕರ್​​ ವಿಡಿಯೋ ಸಂವಾದ - Lockdown down relaxation

ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿಯ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಮಾಹಿತಿ ಪಡೆದಿದ್ದಾರೆ. ಕೇಂದ್ರ ಸರ್ಕಾರ ನಾಳೆ ಲಾಕ್​​ಡೌನ್ ಕುರಿತು ನೂತನ ನಿಯಮ ಜಾರಿ ಮಾಡಲಿದ್ದು, ಈ ಕುರಿತು ಆಯಾ ಜಿಲ್ಲೆಗಳ ಕೊರೊನಾ ಪರಿಸ್ಥಿತಿ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.

Vijaya Bhaskar Video Conversation With All DCs On Corona
ಕೊರೊನಾ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವಿಜಯ ಭಾಸ್ಕರ್​​ ವಿಡಿಯೋ ಸಂವಾದ

By

Published : May 15, 2020, 8:39 PM IST

ಬೆಂಗಳೂರು: ಮೂರನೇ ಹಂತದ ಲಾಕ್​ಡೌನ್ ಅಂತ್ಯಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ವಿಡಿಯೋ ಸಂವಾದ ನಡೆಸಿದರು.

ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳು ಭಾಗವಹಿಸಿದ್ದರು. ಕೊರೊನಾ ಸೋಂಕು ನಿಯಂತ್ರಣ ಮತ್ತು ಲಾಕ್​ಡೌನ್ ಸಂಬಂಧ ಸಲಹೆ- ಸೂಚನೆಗಳನ್ನು ನೀಡಿದರು. ಜಿಲ್ಲಾ ಮಟ್ಟದಲ್ಲಿನ ಕೊರೊನಾ ಪರಿಸ್ಥಿತಿ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಿದರು. ಜಿಲ್ಲೆಗಳಲ್ಲಿನ ಕಂಟೈನ್ಮೆಂಟ್ ವಲಯಗಳಲ್ಲಿನ ಸ್ಥಿತಿಗತಿ, ಕಂಟೈನ್ಮೆಂಟ್ ಝೋನ್​​​​​​​ಗಳ ಬಗ್ಗೆ ವಿವರಣೆ ಪಡೆದಿದ್ದಾರೆ.

ಹೊರ ರಾಜ್ಯಗಳಿಂದ ಬಂದವರ ಕ್ವಾರಂಟೈನ್ ವ್ಯವಸ್ಥೆ, ಸೋಂಕು ಪತ್ತೆ ಬಗ್ಗೆಯೂ ಮುಖ್ಯ ಕಾರ್ಯದರ್ಶಿ ವಿವರಣೆ ಕೇಳಿದ್ದಾರೆ. ಲಾಕ್‌ಡೌನ್ ಸಡಿಲಿಕೆಯಾದ ಬಳಿಕದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ನಾಳೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಂದಲೂ ಅಭಿಪ್ರಾಯ ಕೇಳಿದ್ದಾರೆ. ಪ್ರಯಾಣ ಬೆಳೆಸುವವರಿಂದ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಪ್ರಯಾಣಿಕರ ಮೇಲೆ ಹೆಚ್ಚಿನ ಗಮನವಹಿಸಿ, ಅವರನ್ನು ಕ್ವಾರಂಟೈನ್​ ಮಾಡುವಂತೆ ಸಿ.ಎಸ್. ವಿಜಯಭಾಸ್ಕರ್ ಸೂಚಿಸಿದ್ದಾರೆ.

ABOUT THE AUTHOR

...view details