ಬೆಂಗಳೂರು/ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಬಿಜೆಪಿ ಶಾಸಕರ ವಿರೋಧದ ನಡುವೆಯೂ ವಿಜಯನಗರ ಜಿಲ್ಲೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ವಿಜಯನಗರ ಜಿಲ್ಲೆ ರಚಿಸಿ ಅಧಿಸೂಚನೆ ಹೊರಡಿಸಿದ ಸರ್ಕಾರ : ಆನಂದ ಸಿಂಗ್ ಮುನಿಸಿಗೆ ಮುಲಾಮು - ವಿಜಯನಗರ ಜಿಲ್ಲೆ
15:13 February 08
ವಿಜಯನಗರ ಜಿಲ್ಲೆ ರಚನೆ ಸಂಬಂಧ ಅಧಿಕೃತ ಆದೇಶದ ಮೂಲಕ ಸಚಿವ ಆನಂದ್ ಸಿಂಗ್ ಮುನಿಸಿಗೆ ಮದ್ದು ನೀಡಿದ್ದಾರೆ ಮುಖ್ಯಮಂತ್ರಿಗಳು..
ನೂತನ ಜಿಲ್ಲೆಯಲ್ಲಿ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿಗಳನ್ನು ತಾಲೂಕುಗಳಾಗಿ ಸೇರ್ಪಡೆಗೊಳಿಸಲಾಗಿದೆ. ಹೊಸಪೇಟೆ ಜಿಲ್ಲಾ ಕೇಂದ್ರವಾಗಿರಲಿದೆ.
ಇತ್ತ ವಿಜಯನಗರ ಜಿಲ್ಲೆ ರಚನೆ ಸಂಬಂಧ ಅಧಿಕೃತ ಆದೇಶ ವಿಳಂಬದಿಂದ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸಿಗೆ ಬಿ ಎಸ್ ಯಡಿಯೂರಪ್ಪ ಮುಲಾಮು ಹಚ್ಚಿದ್ದಾರೆ.
ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಎಂಬ ಮಾತು ಸಹ ಕೇಳಿ ಬಂದಿತ್ತು. ಇದರ ಜೊತೆಗೆ ಸಿಎಂ ಆಯೋಜಿಸಿದ್ದ ಔತಣಕೂಟಕ್ಕೂ ಗೈರಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಇದೀಗ ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆ ರಚನೆ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ.