ಕರ್ನಾಟಕ

karnataka

ETV Bharat / state

ಬಾಗಲಕೋಟೆ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಗೆಲುವಿಗೆ ಕಾರಣರಾದ ಕಾಶಪ್ಪನವರ್​ಗೆ​ ಸಚಿವ ಸ್ಥಾನಕ್ಕಾಗಿ ಆಗ್ರಹ - ಈಟಿವಿ ಭಾರತ್​ ಕರ್ನಾಟಕ

ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹುನಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾದರ ದೊಡ್ಡಮನಿ ಆಗ್ರಹಿಸಿದ್ದಾರೆ.

ವಿಜಯಾನಂದ ಕಾಶಪ್ಪನವರರಿಗೆ​ ಸಚಿವ ಸ್ಥಾನಕ್ಕೆ ಆಗ್ರಹ
ವಿಜಯಾನಂದ ಕಾಶಪ್ಪನವರರಿಗೆ​ ಸಚಿವ ಸ್ಥಾನಕ್ಕೆ ಆಗ್ರಹ

By

Published : May 17, 2023, 7:37 PM IST

ಬೆಂಗಳೂರು : ಕಾಂಗ್ರೆಸ್​ ಸಚಿವ ಸಂಪುಟದಲ್ಲಿ ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ, ಹಿರಿಯ ನಾಯಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಲಿಂಗಾಯತ ಪಂಚಮಸಾಲಿ ಜನಾಂಗದ ನಾಯಕರಾಗಿರುವ ಕಾಶಪ್ಪನವ ಅವಕಾಶ ಕಲ್ಪಿಸುವ ಮೂಲಕ ಬಾಗಲಕೋಟೆ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಇಳಕಲ್ ತಾಲ್ಲೂಕು ಲಿಂಗಾಯತ ಪಂಚಮಸಾಲಿ ಅಧ್ಯಕ್ಷ ಮಹಾಂತಗೌಡ ಪಾಟೀಲ, ಹುನಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾದರ ದೊಡ್ಡಮನಿ ಆಗ್ರಹಿಸಿದರು.

ಇಂದು (ಬುಧವಾರ) ಪ್ರೆಸ್ ಕ್ಲಬ್​ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಲಿಂಗಾಯತ ಪಂಚಮಸಾಲಿ ಅಧ್ಯಕ್ಷ ಮಹಾಂತಗೌಡ ಪಾಟೀಲ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ನಡೆದ ಹೋರಾಟದಿಂದ ಬಾಗಲಕೋಟೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧ್ಯವಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿರುವ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದರು.

ಇದನ್ನೂ ಓದಿ :ಹೈಕಮಾಂಡ್ ಮೂರನೇ ಆಯ್ಕೆ ಬಯಸಿದರೆ ಸಿಎಂ ಆಗಲು ನಾನು ಸಿದ್ಧ: ಪರಮೇಶ್ವರ್

ವಿಜಯಾನಂದ ಕಾಶಪ್ಪನವರ್ ಹುನಗುಂದ ಕ್ಷೇತ್ರದಿಂದ 2 ನೇ ಬಾರಿ ಆಯ್ಕೆಯಾಗಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾಗಿ, ರಾಜ್ಯಾದ್ಯಂತ 700 ಕಿ.ಮೀ ಪಾದಯಾತ್ರೆ ಮಾಡಿ ಪಂಚಮಸಾಲಿ ಸಮುದಾಯವನ್ನು ಸಂಘಟನೆ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಅವರ ಕೊಡುಗೆ ಹೆಚ್ಚಿದೆ. ಎನ್‍ಆರ್​ಸಿ, ಸಿಆರ್​ಎನ್ ರದ್ದಿಗಾಗಿ ಇಳಕಲ್ ನಿಂದ ಬಿಜಾಪುರವರೆಗೆ ಪಾದಯಾತ್ರೆ ಮಾಡಿದ್ದಾರೆ. ಇಂತಹ ಜನಪರ ಹೋರಾಟಗಾರನಿಗೆ ಅವಕಾಶ ಕಲ್ಪಿಸಬೇಕು ಎಂದರು.

ಬಳಿಕ ಮಾತನಾಡಿದ ಹುನಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾದರ ದೊಡ್ಡಮನಿ, ಎರಡು ದಶಕಗಳಿಂದ ಹುನಗುಂದ ಕ್ಷೇತ ಅಧಿಕಾರ ವಂಚಿತವಾಗಿದೆ. ಸ್ವಾತಂತ್ರ್ಯ ನಂತರ ಸಿ.ಎಸ್.ಆರ್. ಕಂಠಿ, ಎಸ್.ಬಿ. ನಾಗರಾಳ ಮತ್ತು ಎಸ್.ಆರ್. ಕಾಶಪ್ಪನವರ್ ಮಾತ್ರ ಸಚಿವರಾಗಿದ್ದು, ನಂತರ ಯಾವುದೇ ಸ್ಥಾನಮಾನ ಸಿಕ್ಕಿಲ್ಲ. ವಿಜಯಾನಂದ ಕಾಶಪ್ಪನವರ್ ತಂದೆ ಎಸ್.ಆರ್. ಕಾಶಪ್ಪನವರ್ 3 ಬಾರಿ ಹಾಗೂ ತಾಯಿ ಗೌರಮ್ಮ ಕಾಶಪ್ಪನವರ್​ 1 ಬಾರಿ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು. ಕಳೆದ 40 ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸುವ ಜೊತೆಗೆ ಕಾಶಪ್ಪನವರ್ ಕುಟುಂಬ ಪಕ್ಷವನ್ನು ಗಟ್ಟಿಗೊಳಿಸಿದ್ದಾರೆ ಎಂದು ಹೇಳಿದರು.

ಮಾಧ್ಯಮಗೋಷ್ಟಿಯಲ್ಲಿ ಇಳಕಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ತಟಗಾರ್, ಕರ್ನಾಟಕ ರಾಜ್ಯ ಬೋವಿ ವಡ್ಡರ್ ಮಹಾಸಭಾ ರಾಜ್ಯ ಕಾರ್ಯದರ್ಶಿ ಹುಲ್ಲಪ್ಪ ಹಳ್ಳೂರ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಿತ ರಕ್ಷಣಾ ವೇದಿಕೆ ಕಾರ್ಯದರ್ಶಿ ಸುರೇಶ್ ಜಂಗ್ಲಿ, ಮಡಿವಾಳ ಮಾಚಿದೇವ ಸಮಾಜ ಅಧ್ಯಕ್ಷ ವಿರೇಶ್ ಮಡಿವಾಳರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮಹಾಂತೇಶ್ ನರಗುಂದ್ ಉಪಸ್ಥಿತರಿದ್ದರು.

ಇದನ್ನೂ ಓದಿ :ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಬ್ಲಾಕ್ ಮೇಲ್ ತಂತ್ರ ಎಂದ ಛಲವಾದಿ ನಾರಾಯಣಸ್ವಾಮಿ ಆರೋಪ.

ABOUT THE AUTHOR

...view details