ಕರ್ನಾಟಕ

karnataka

ETV Bharat / state

ವಿಜಯೇಂದ್ರಗೆ ಟಿಕೆಟ್ ತಪ್ಪಿದರ ಬಗ್ಗೆ ವಿಶೇಷ ಅರ್ಥ ಬೇಡ: ಮುಂದೆ ಬೇರೆ ಅವಕಾಶಗಳಿವೆ - ಬಿಎಸ್​ವೈ

ಸದ್ಯ ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

Ex CM bs yediyurappa
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : May 25, 2022, 2:30 PM IST

Updated : May 25, 2022, 4:48 PM IST

ಬೆಂಗಳೂರು: ಬಿಜೆಪಿ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ಪರಿಷತ್ ಟಿಕೆಟ್ ತಪ್ಪಿರುವುದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಮುಂದೆ ಅವರಿಗೆ ಬೇರೆ - ಬೇರೆ ಅವಕಾಶಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸದ್ಯ ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ. ಮುಂದಿನ ಚುನಾವಣೆ ಸ್ಪರ್ಧೆ ಬಗ್ಗೆ ಈಗಲೇ ಯಾಕೆ ಚರ್ಚೆ ಎಂದು ಅಷ್ಟೇ ಹೇಳಿದರು.

2023ಕ್ಕೆ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನುವುದೇ ನಮ್ಮ‌ಗುರಿ. ಆ ನಿಟ್ಟಿನಲ್ಲಿ ಏನೆಲ್ಲ ಪ್ರಯತ್ನಗಳನ್ನು ಮಾಡಬೇಕೋ ಅದನ್ನು ಈಗಿನಿಂದಲೇ ಮಾಡುತ್ತೇವೆ. ಮುಂದಿನ‌ ಚುನಾವಣೆಯಲ್ಲಿ ಬಿಜೆಪಿ‌ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಭವಿಷ್ಯದಲ್ಲಿ ದೊಡ್ಡ ಅವಕಾಶ :ವಿಜಯೇಂದ್ರಗೆ ಪರಿಷತ್ ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಎಸ್​​​​ವೈ, ವಿಜಯೇಂದ್ರಗೆ ಟಿಕೆಟ್ ಕೊಡದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಸಹಜವಾಗಿ ವಿಜಯೇಂದ್ರಗೆ ಭವಿಷ್ಯದಲ್ಲಿ ಹೈಕಮಾಂಡ್ ದೊಡ್ಡ ಅವಕಾಶ ಕಲ್ಪಿಸಿಕೊಡುವ ಭರವಸೆ ನನಗೆ ಇದೆ ಎಂದು ಹೇಳಿದರು.

ಶೀಘ್ರದಲ್ಲೇ ಕೆಲವು ಮಾರ್ಪಾಡುಗಳಾಗಬಹುದು. ಹೆಚ್ಚಿನ ಜವಾಬ್ದಾರಿಗಳನ್ನು ಕೊಡಬಹುದು ಎಂದು ಹೇಳಿದರು. ಮುಂದಿನ‌ ವಿಧಾಸಭೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ ಈಗಲೇ ಅದರ ಬಗ್ಗೆ ಯಾಕೆ ಚರ್ಚೆ. ಸಮಯ ಬಂದಾಗ ಅದರ ಬಗ್ಗೆ ನೋಡೋಣ ಎಂದರು.

ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿರುವುದಕ್ಕೂ ಬಿ.ಎಲ್. ಸಂತೋಷ್ ಅವರಿಗೂ ಸಂಬಂಧ ಇಲ್ಲ. ಅನಗತ್ಯವಾಗಿ ಮಾಧ್ಯಮಗಳಲ್ಲಿ ಅವರ ಹೆಸರು ಬರುತ್ತಿದೆ. ಇದರಲ್ಲಿ ಏನೂ ಅರ್ಥ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ವಿಜಯೇಂದ್ರರಿಗೆ ಟಿಕೆಟ್ ತಪ್ಪಿದ್ದು, ಬಿಜೆಪಿಗೆ ತಿರುಗುಬಾಣ : ಮಾಜಿ ಸಿಎಂ ಹೆಚ್‌ಡಿಕೆ

Last Updated : May 25, 2022, 4:48 PM IST

ABOUT THE AUTHOR

...view details