ಕರ್ನಾಟಕ

karnataka

ETV Bharat / state

ವಿಕಸಿತ ಭಾರತ ಸಂಕಲ್ಪ ಯಾತ್ರೆ: ಪ್ರಧಾನಿ ಕಾರ್ಯಕ್ರಮ ನೇರಪ್ರಸಾರ ವೀಕ್ಷಿಸಿದ ರಾಜ್ಯ ಬಿಜೆಪಿ ನಾಯಕರು - ಚುನಾವಣಾ ಯೋಜನಾ ಸಭೆ

ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿ ನಾಯಕರು ದಿಬ್ಬೂರು ಗ್ರಾಮಕ್ಕೆ ತೆರಳಿ ಅಲ್ಲಿ ಆಯೋಜಿಸಿದ್ದ, ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಿದರು.

State BJP leaders watched PM 's program live
ಪ್ರಧಾನಿ ಕಾರ್ಯಕ್ರಮ ನೇರಪ್ರಸಾರ ವೀಕ್ಷಿಸಿದ ರಾಜ್ಯ ಬಿಜೆಪಿ ನಾಯಕರು

By ETV Bharat Karnataka Team

Published : Jan 8, 2024, 6:26 PM IST

Updated : Jan 8, 2024, 8:12 PM IST

ಬೆಂಗಳೂರು:ಯಲಹಂಕದ ಹೆಸರಘಟ್ಟ ಹೋಬಳಿ, ದಿಬ್ಬೂರು ಗ್ರಾಮದಲ್ಲಿ ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಡಿ ಪ್ರಧಾನಿ ನರೇಂದ್ರ ಮೋದಿ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆಸಿದ ಸಂವಾದ ನೇರಪ್ರಸಾರವನ್ನು ರಾಜ್ಯ ಬಿಜೆಪಿ ಪ್ರಮುಖರು ವೀಕ್ಷಿಸಿದರು.

ಪ್ರಧಾನಿ ಕಾರ್ಯಕ್ರಮ ನೇರಪ್ರಸಾರ ವೀಕ್ಷಿಸಿದ ರಾಜ್ಯ ಬಿಜೆಪಿ ನಾಯಕರು

ನಗರದ ಹೊರವಲಯದಲ್ಲಿರುವ ಹೋಟೆಲ್ ರಮಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಬಿಜೆಪಿ ನಾಯಕರು ಹಾಗು ಪ್ರಭಾರಿಗಳು ಸಭೆಗೆ ಅಲ್ಪವಿರಾಮ ನೀಡಿ ಹೆಸರಘಟ್ಟ ಹೋಬಳಿಯಲ್ಲಿರುವ ದಿಬ್ಬೂರು ಗ್ರಾಮಕ್ಕೆ ತೆರಳಿದರು. ಅಲ್ಲಿ ಆಯೋಜನೆ ಮಾಡಿದ್ದ ಪ್ರಧಾನಿ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ, ಬಿ.ವೈ. ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ ವಿ ಸದಾನಂದ ಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಸಂಸದರು, ಶಾಸಕರು ಮತ್ತು ಪಕ್ಷದ ಮುಖಂಡರು ನೇರ ಪ್ರಸಾರ ವೀಕ್ಷಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಮೋದಿ 3ನೇ ಬಾರಿಗೆ ಪ್ರಧಾನಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

Last Updated : Jan 8, 2024, 8:12 PM IST

ABOUT THE AUTHOR

...view details