ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ತಮ್ಮನ್ನು ಆರೋಪದಿಂದ ಮುಕ್ತಿಗೊಳಿಸಬೇಕೆಂದು ಕೋರಿ ಅನರ್ಹ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಮುನಿರತ್ನ ಅರ್ಜಿ ವಜಾಗೊಳಿಸಿದ ಕೋರ್ಟ್
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಅನರ್ಹ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪದಿಂದ ಮುಕ್ತಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣ ರದ್ದು ಕೋರಿ ಅನರ್ಹ ಶಾಸಕ ಮುನಿರತ್ನ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್ ಪೀಠದಲ್ಲಿ ನಡೆಯಿತು. ಸಾಕ್ಷಿಗಳ ವಿಚಾರಣೆಗೆ ಆದೇಶಿಸಿ ಡಿಸೆಂಬರ್ 11ಕ್ಕೆ ವಿಚಾರಣೆ ಮುಂದೂಡಿದೆ.
ಪ್ರಕರಣ: 2018ರ ವಿಧಾನಸಭೆ ಚುನಾವಣೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರಿಗೆ ಹಂಚಲು ಮದ್ಯ ಹಾಗೂ ಮುನಿರತ್ನ ಭಾವಚಿತ್ರದ ಟೀ ಶರ್ಟ್ಗಳನ್ನು ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಮಾಹಿತಿ ಪಡೆದ ಎಲೆಕ್ಷನ್ ಸ್ಕ್ವಾಡ್ ಪರಿಶೀಲನೆ ನಡೆಸಿ ಮುನಿರತ್ನ ಭಾವಚಿತ್ರವಿದ್ದ ₹ 95 ಲಕ್ಷ ಮೌಲ್ಯದ ಟೀ ಶರ್ಟ್ಗಳನ್ನ ಪತ್ತೆ ಮಾಡಿತ್ತು.