ಕರ್ನಾಟಕ

karnataka

ETV Bharat / state

DKS: ಕೊರೋನಾ ನಿಯಮ ಉಲ್ಲಂಘನೆ... ಡಿಸಿಎಂ ಡಿಕೆಶಿ ವಿರುದ್ಧ ದಾಖಲಾದ ಪ್ರಕರಣ ರದ್ದು - ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಕೋವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆ ಡಿಕೆಶಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೊರ್ಟ್​ ರದ್ದುಪಡಿಸಿದೆ.

ಹೈಕೊರ್ಟ್​
ಹೈಕೊರ್ಟ್​

By

Published : Jun 10, 2023, 8:05 AM IST

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ನಡೆಸಿದ ಪಾದಯಾತ್ರೆ ವೇಳೆ ಕೊರೋನಾ ನಿಯಮಗಳ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳನ್ನು ಹರಡುವಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೊರ್ಟ್​ ರದ್ದುಪಡಿಸಿ ಆದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕನಕಪುರ ಟೌನ್ ಠಾಣಾ ಪೊಲೀಸರು ಮತ್ತು ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ದಾಖಲಿಸಿದ್ದ ಪ್ರತ್ಯೇಕ ಎರಡು ಪ್ರಕರಣಗಳ ಮುಂದಿನ ಕಾನೂನು ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಮತ್ತೊಂದೆಡೆ ಪ್ರಜಾಧ್ವನಿ ಯಾತ್ರೆ ನಡೆಸುವ ವೇಳೆ ಮಂಡ್ಯದಲ್ಲಿ 500 ನೋಟು ಅನ್ನು ಕಾರ್ಯಕರ್ತರತ್ತ ಬಿಸಾಡಿದ ಪ್ರಕರಣ ಸಂಬಂಧ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ಡಿ.ಕೆ.ಶಿವಕುಮಾರ್ ಅವರು ಹಿಂಪಡೆದುಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು 2022ರ ಜ.9 ರಿಂದ 10 ದಿನ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆ ವೇಳೆ ಕೊರೋನಾ ನಿಯಮ ಉಲ್ಲಂಘಿದ್ದಲ್ಲದೆ, ಸಾಂಕ್ರಾಮಿಕ ರೋಗ ಹರಡಲು ಕಾರಣವಾದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣೆ ಕಾಯ್ದೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಡಿ.ಕೆ. ಶಿವಕುಮಾರ್ ವಿರುದ್ಧ ಉಪ್ಪಾರಪೇಟೆ, ಹಲಸೂರು ಗೇಟ್ ಮತ್ತು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.

ಈ ಎಲ್ಲ ದೂರುಗಳನ್ನು ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿದಾರರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ವಕೀಲ ಅರ್ನವ್ ಬಗಲವಾಡಿ ಅವರು ವಾದ ಮಂಡಿಸಿದ್ದರು.

ಡಿಕೆಶಿ ಮೇಲೆ ಬೆಲೆ ಏರಿಕೆ ಆರೋಪ: ಜೂನ್​ 6 ರಂದು ರಾಜ್ಯ ವಿರೋಧ ಪಕ್ಷ ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ಬಿಜೆಪಿ ಮುಖಂಡರು ಗೋ ಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ, ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸುತ್ತಿರುವುದರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ ಅಶ್ವತ್ಥ ನಾರಾಯಣ್ ಡಿಕೆಶಿ ವಿರುದ್ಧ, ಉಚಿತ ವಿದ್ಯುತ್ ಎಂದು ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಚೊಚ್ಚಲ ಕೊಡುಗೆ ಬೆಲೆ ಏರಿಕೆಯಾಗಿದೆ. ವಿದ್ಯುತ್ ಉತ್ಪಾದನೆ ವೆಚ್ಚ ಕಡಿಮೆ ಆದರೂ ವಿದ್ಯುತ್ ದರ ಏರಿಕೆ ಆಗುತ್ತಿದೆ. ಬೆಲೆ ಏರಿಕೆ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ರಕ್ತ ಹೀರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ:Deputy CM Shivakumar: ಡಿಕೆಶಿಯಿಂದ ಮುಂದುವರಿದ ಟೆಂಪಲ್​ ರನ್​.. ಇಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿರುವ ಉಪಮುಖ್ಯಮಂತ್ರಿ

ABOUT THE AUTHOR

...view details