ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ ಸಂತಾಪ ಸೂಚಿಸಿದ್ದಾರೆ.
ಅರುಣ್ ಜೇಟ್ಲಿ ನಿಧನಕ್ಕೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಸಂತಾಪ..
ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಹಿರಿಯ ನಾಯಕ ಅರುಣ್ ಜೇಟ್ಲಿ ನಿಧನರಾಗಿರುವುದು ನಮ್ಮ ಪಕ್ಷಕ್ಕೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದರು.
ಡಾಲರ್ಸ್ ಕಾಲೋನಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಹಿರಿಯ ನಾಯಕ ಅರುಣ್ ಜೇಟ್ಲಿ ನಿಧನರಾಗಿರುವುದು ನಮ್ಮ ಪಕ್ಷಕ್ಕೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ.ಸಮರ್ಥ ರಕ್ಷಣಾ ಸಚಿವರಾಗಿ, ಆರ್ಥಿಕ ತಜ್ಞರಾಗಿ, ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಮೊದಲ ಬಾರಿ ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಲು ಪ್ರಮುಖ ಪಾತ್ರವಹಿಸಿದ್ದರು.
ಅವರ ನೆರಳಲ್ಲಿ ಬಹಳ ಜನ ನಾಯಕರಾಗಿ ಬೆಳೆದಿದ್ದೇವೆ. ಜೇಟ್ಲಿ ಅಗಲಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅವರ ಸ್ಥಾನ ಯಾರು ತುಂಬಲಿದ್ದಾರೆ ಎನ್ನುವುದು ಪ್ರಶ್ನೆಯಾಗಿದೆ. ಅವರ ಕುಟುಂಬ ವರ್ಗ ಹಾಗೂ ಪಕ್ಷದ ಕಾರ್ಯಕರ್ತರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದರು.