ಕರ್ನಾಟಕ

karnataka

ETV Bharat / state

ಅಂಗೀಕಾರವಾಗದ ವಿಶ್ವನಾಥ್ ರಾಜೀನಾಮೆ: ಮುಂದುವರೆದ ಮನವೊಲಿಕೆ ಯತ್ನ? - ರಾಜ್ಯಾಧ್ಯಕ್ಷ

ದೇವೇಗೌಡರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಓಲೈಸುವ ಸಾಧ್ಯತೆಗಳಿವೆ.

ಶಾಸಕ ಹೆಚ್. ವಿಶ್ವನಾಥ್

By

Published : Jun 7, 2019, 7:55 PM IST

ಬೆಂಗಳೂರು:ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಹೆಚ್. ವಿಶ್ವನಾಥ್ ಅವರ ಮನವೊಲಿಸುವ ಪ್ರಯತ್ನ ಮುಂದುವರೆದಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ನೀಡಿರುವ ರಾಜೀನಾಮೆ ಅಂಗೀಕಾರವಾಗಿಲ್ಲ. ಹಾಗಂತ ಅವರು ರಾಜೀನಾಮೆ ನಿರ್ಧಾರದಿಂದ ಹಿಂದೆಯೂ ಸರಿದಿಲ್ಲ. ಕಳೆದ ನಾಲ್ಕು ದಿನಗಳಿಂದ ಈ ವಿಚಾರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.ವಿಶ್ವನಾಥ್ ಕೂಡ ತಮ್ಮ ನಿಲುವಿಗೆ ಅಂಟಿಕೊಂಡಿರುವುದರಿಂದ ಜೆಡಿಎಸ್ ವರಿಷ್ಠರು ಮತ್ತೊಮ್ಮೆ ಅವರನ್ನು ಭಾವನಾತ್ಮಕವಾಗಿ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ.

ದೇವೇಗೌಡರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು, ರಾಜೀನಾಮೆಯನ್ನು ವಾಪಸ್ ಪಡೆದು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ವಿಶ್ವನಾಥ್ ಅವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ತಮ್ಮ ನಿಲುವಿಗೆ ಅಂಟಿಕೊಂಡಿದ್ದ ವಿಶ್ವನಾಥ್ ಅವರು ಕಾಲಾವಕಾಶವನ್ನು ಕೋರಿದ್ದಾರೆ ಎನ್ನಲಾಗಿದೆ.

ಇಂದು ನಗರದ ಅರಮನೆ ಮೈದಾನದಲ್ಲಿ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಕಾರ್ಯಕ್ರಮಕ್ಕೂ ಅವರು ಆಗಮಿಸಿರಲಿಲ್ಲ. ತಮ್ಮ ಕ್ಷೇತ್ರದಲ್ಲಿ ರಾಜಕೀಯ ಮುಖಂಡರೊಬ್ಬರು ನಿಧನರಾದ ಕಾರಣ ವಿಶ್ವನಾಥ್ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಎನ್ನಲಾಗಿದೆ.

ABOUT THE AUTHOR

...view details