ಬೆಂಗಳೂರು:ವಿವಿಐಪಿ ಭದ್ರತೆ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಡಿಸಿಪಿ/ ಎಸ್ಪಿಗಳಿಗೆ ತಾಕೀತು ಮಾಡಿದ್ದಾರೆ.
ಆಯಾ ಜಿಲ್ಲಾ ಎಸ್ಪಿಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಧ್ವನಿಯಾಗಬೇಕು. ವಿವಿಐಪಿ ಭದ್ರತೆ ಕರ್ತವ್ಯವಿದ್ದರೆ ತಿಂಗಳಿಗೊಮ್ಮೆ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಲಿನ ಕಾರ್ಯವೈಖರಿ ಜನರ ಕಷ್ಟ ಆಲಿಸಿ ಪರಿಹರಿಸಬೇಕು. ಠಾಣಾಧಿಕಾರಿ, ಪಿಎಸ್‌ಐ, ಎಎಸ್‌ಐ, ಹೆಡ್ ಕಾನ್‌ಸ್ಟೇಬಲ್, ಕಾನ್‌ಸ್ಟೇಬಲ್‌ಗಳ ಕಷ್ಟ-ಸುಖಗಳು ಮತ್ತು ಸಲಹೆ-ಸೂಚನೆಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಆದೇಶಿಸಿದ್ದಾರೆ.