ಬೆಂಗಳೂರು: ಬೆಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ವಕೀಲ ವಿವೇಕ್ ರೆಡ್ಡಿ ಅವರು 1,910 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ.
ವಿವೇಕ್ ಸುಬ್ಬಾರೆಡ್ಡಿ ಅವರು 4,804 ಮತಗಳನ್ನು ಪಡೆದರೆ, ಅವರ ನಿಕಟ ಸ್ಪರ್ಧಿ ರಂಗನಾಥ್ ಅವರು 2,894 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಗರಿಷ್ಠ ಮತಗಳ ಅಂತರದಿಂದ ವಿವೇಕ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:ಸಿಎಂ ಬೊಮ್ಮಾಯಿಯವರು ಕೇಂದ್ರದಲ್ಲಿ ಕ್ಯಾಬಿನೆಟ್ ಮಂತ್ರಿ ಆಗ್ತಾರೆ : ಮುರುಗೇಶ್ ನಿರಾಣಿ ಭವಿಷ್ಯ
ವಿವೇಕ್ ರೆಡ್ಡಿ ಆಯ್ಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದು, ಅವರನ್ನು ಅಭಿನಂದಿಸಿದ್ದಾರೆ. ಬೆಂಗಳೂರು ವಕೀಲರ ಸಂಘವು ವಿವೇಕ್ ರೆಡ್ಡಿ ಅವರ ನೇತೃತ್ವದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲಿ ಎಂದು ಅವರು ಆಶಿಸಿದ್ದಾರೆ.