ಬೆಂಗಳೂರು:ಮತದಾರರಿಂದ ಅಕ್ರಮ ಮಾಹಿತಿ ಕಳವು ಪ್ರಕರಣ ಸಂಬಂಧ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್, ಸೇರಿದಂತೆ ಮೂವರನ್ನು 12 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದು, ಹಲಸೂರು ಗೇಟ್ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.
ರವಿಕುಮಾರ್ ಜೊತೆಗೆ ಕೆಂಪೇಗೌಡ ಹಾಗೂ ಪ್ರಜ್ವಲ್ ಎಂಬುವರನ್ನು ನಿನ್ನೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಡಿ.2ರವರೆಗೆ ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಬಿಬಿಎಂಪಿ ಚುನಾವಣೆ ನಿಟ್ಟಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದ್ದ ಪಾಲಿಕೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಆರ್ ಓ(ಕಂದಾಯ ಅಧಿಕಾರಿ)ಗಳಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿತ್ತು.