ಬೆಂಗಳೂರು:'ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ' ಹಗರಣವನ್ನು ಚೀಫ್ ಜಸ್ಟಿಸ್ ಅವರಿಂದ ತನಿಖೆ ಮಾಡಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಮೈಸೂರು ಪ್ರವಾಸಕ್ಕೆ ಹೊರಡುವ ಮುನ್ನ ತಮ್ಮ ನಿವಾಸದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಚಿಲುಮೆ ಸಂಸ್ಥೆಗೆ ಮೈತ್ರಿ ಸರ್ಕಾರ ಇದ್ದಾಗಲೇ ಅನುಮತಿ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಇವರ ಕಾಲದಲ್ಲಿ ಇತ್ತು ಎಂದು ಕೇಳುತ್ತೀರಲ್ಲ. ಒಂದು ಸಂಸ್ಥೆ ದುಡ್ಡು ಇಲ್ಲದೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಜಾಹೀರಾತು ಕೊಡದೆ ಅವರಿಗೆ ಕೊಟ್ಟಿದ್ದಾರೆ. ಅವರು ಬಿಎಲ್ಓಗಳನ್ನು ಇಂಪರ್ಸನೇಶನ್ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ? ಎಂದು ಪ್ರಶ್ನಿಸಿದರು.
ವ್ಯವಹಾರ ಎಷ್ಟು ನಡೆದಿರಬಹುದು. ಹಣ ಇಲ್ಲದೆ ಮಾಡುತ್ತಿದ್ದಾರೆ. 8 ಸಾವಿರ ರೂ., 10 ಸಾವಿರ ರೂ. ಜನರನ್ನು ನೇಮಕ ಮಾಡಬೇಕಾದರೆ ಎಷ್ಟು ಹಣ ಬೇಕು. ದಿನಕ್ಕೆ 1500 ಕೊಡಬೇಕಾದರೇ ಎಷ್ಟು ಹಣ ಬೇಕು. ಅದಕ್ಕೆ ಹಿಂದಿನ ಕಾಲದಲ್ಲಿ ಆಗಿತ್ತು. ಅಂದರೆ ಮೊದಲು ತನಿಖೆ ಮಾಡಲಿ, ನಾವು ಕೇಸ್ ದಾಖಲು ಮಾಡಿದ್ದೇವೆ ಎಂದರು.