ಕರ್ನಾಟಕ

karnataka

ETV Bharat / state

ಮತದಾರರ ಮಾಹಿತಿ ಅಕ್ರಮ ಜನರ ಮುಂದೆ ಇಟ್ಟಿದ್ದೇವೆ, ಕ್ರಮ ಕೈಗೊಳ್ಳಲು ಸರಕಾರ ವಿಳಂಬ: ಡಿಕೆಶಿ ಆರೋಪ - ಸರಕಾರ ವಿಳಂಬ

ಬೆಂಗಳೂರ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

dk shivakumar tribute to Indira Gandhi portrait
ಇಂದಿರಾ ಗಾಂಧಿ ಭಾವಚಿತ್ರಕ್ಕೆ ಡಿಕೆಶಿ ಪುಷ್ಪನಮನ

By

Published : Nov 19, 2022, 3:16 PM IST

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ ನಿಮಿತ್ತ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ಮತದಾರರ ಮಾಹಿತಿ ಅಕ್ರಮದ ಬಗ್ಗೆ ಎಲ್ಲ ವಿಚಾರವನ್ನು ಜನರ ಮುಂದೆ ಇಟ್ಟಿದ್ದೇವೆ. ಮತದಾರರ ಪಟ್ಟಿಯಲ್ಲಿ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಮಾಹಿತಿ ನೀಡಿದ್ದೇವೆ. ಈ ವಿಚಾರವಾಗಿ ಸರ್ಕಾರ ಪ್ರಮುಖ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ನಿನ್ನೆ ಪೊಲೀಸರು ದಾಳಿ ನಡೆಸಿ ಕೆಲವು ದಾಖಲೆ ವಶಪಡಿಸಿಕೊಂಡಿದ್ದು, ಅಲ್ಲಿ ನೋಟು ಏಣಿಕೆ ಯಂತ್ರಗಳು ಲಭ್ಯವಾಗಿವೆ. ಟ್ರಸ್ಟ್ ಗಳಲ್ಲಿ 2 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ದೇಣಿಗೆಯಾಗಿ ಪಡೆಯುವಂತಿಲ್ಲ. ಚೆಕ್ ಮೂಲಕ ಪಡೆಯಬೇಕು. ಹೀಗಿರುವಾಗ ಅಲ್ಲಿ ನೋಟು ಏಣಿಕೆ ಯಂತ್ರ ಯಾಕಿತ್ತು? ಆ ಕಚೇರಿಯಲ್ಲಿ ಕಪ್ಪು ಹಣ ಬಿಳಿ ಹಣವಾಗಿ ಪರಿವರ್ತನೆಯಾಗುತ್ತಿತ್ತು. ಈ ವಿಚಾರವಾಗಿ ಮುಂದೆ ದಾಖಲೆ ಸಮೇತ ಮಾತನಾಡುತ್ತೇವೆ ಎಂದು ಹೇಳಿದರು.


ಆತುರದಿಂದ ತೆರಳಿದ ಡಿಕೆಶಿ:ಇಂದು ಸಿಟಿ ಸಿವಿಲ್ ಕೋರ್ಟ್ ಐಟಿ ವಿಚಾರಣೆ ಹಾಜರಾಗಬೇಕಿರುವ ಹಿನ್ನೆಲೆ ಆತುರದಿಂದ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹೊರಟರು.


ಇದನ್ನೂಓದಿ:ಡಿಸೆಂಬರ್ 7ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ

ABOUT THE AUTHOR

...view details