ಬೆಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಕಾರ್ಯಚಟುವಟಿಕೆಗಳ ಅಂಗವಾಗಿ ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ಬಿಎಲ್ಒಗಳಿಂದ ಮನೆ ಮನೆ ಸಮೀಕ್ಷೆ ಕಾರ್ಯ ನಡೆಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.
ಜಿಲ್ಲಾ ಚುನಾವಣಾಧಿಕಾರಿಯ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಕಾರ್ಯವು ಚಾಲ್ತಿಯಲ್ಲಿದ್ದು, ನವೆಂಬರ್ 09 ರಿಂದ ಇಂದಿನವರೆಗೆ ಶೇ. 23 ರಷ್ಟು ಮನೆ ಮನೆ ಸಮೀಕ್ಷೆ ಕಾರ್ಯದಲ್ಲಿ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಚುನಾವಣಾ ವಿಶೇಷ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿ ಮತ್ತು 4 ಅಪರ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮನೆ ಮನೆ ಸಮೀಕ್ಷೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಬಿಎಲ್ಒಗಳಿಗೆ ನಿರ್ದೇಶನ ನೀಡಿದ್ದಾರೆ.
ಆಯೋಗದಿಂದ ನೀಡಲಾಗಿರುವ ನಿಗದಿತ ಅವಧಿಯೊಳಗೆ ಕಾರ್ಯವನ್ನು ಪೂರ್ಣಗೊಳಿಸಲು ಎಲ್ಲಾ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಆಯುಕ್ತರು ಆದೇಶಿಸಿದ್ದಾರೆ.
ಇದನ್ನೂ ಓದಿ:ಡಿ.5ಕ್ಕೆ ಬಿಜೆಪಿ ಮಹತ್ವದ ಸಭೆ: ಚುನಾವಣಾ ಕಾರ್ಯತಂತ್ರ ಕುರಿತು ಗಹನ ಚರ್ಚೆ