ಕರ್ನಾಟಕ

karnataka

ETV Bharat / state

ಉಪಚುನಾವಣೆಯಲ್ಲಿ ಮತದಾರರು ಸ್ಪಷ್ಟ ಸಂದೇಶ ನೀಡಲಿದ್ದಾರೆ: ಸಿದ್ದರಾಮಯ್ಯ ಟ್ವೀಟ್​

ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ - ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

siddaramaih-
ಸಿದ್ದರಾಮಯ್ಯ

By

Published : Apr 8, 2021, 5:36 PM IST

ಬೆಂಗಳೂರು:ಕೊರೊನಾ ರೋಗಬಾಧೆಯಿಂದ ಬೇಸತ್ತಿರುವ ಜನತೆಗೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದ ಇನ್ನಷ್ಟು ತೊಂದರೆ ಎದುರಾಗಿದೆ. ಸರ್ಕಾರ ಕೂಡಲೇ ಮಾತುಕತೆಗೆ ಧಾವಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ - ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ. ಕಳೆದ ಬಾರಿ ಕೆಎಸ್ಆರ್​ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದಿದ್ದಾರೆ.

ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ. ಕೆಎಸ್ಆರ್​ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ತನ್ನ ಪ್ರತಿಷ್ಠೆ ಬದಿಗಿಟ್ಟು ತಕ್ಷಣ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೇ ಕಷ್ಟ -ನಷ್ಟಕ್ಕೀಡಾಗಿರುವ ಜನತೆಯನ್ನು ರಕ್ಷಿಸಬೇಕು. ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿ ತಪ್ಪಿರುವ ರಾಜ್ಯ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ ಮತದಾರರು ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಓದಿ:ಗಗನಕ್ಕೇರಿದ ಬೆಳೆಕಾಳು, ತರಕಾರಿ ಬೆಲೆ: ಗೃಹಿಣಿಯರಿಗೆ ಮನೆ ನಿಭಾಯಿಸುವುದು ಕಷ್ಟ ಕಷ್ಟ!

For All Latest Updates

TAGGED:

ABOUT THE AUTHOR

...view details