ಬೆಂಗಳೂರು: ವೃಷಭಾವತಿ ನದಿ ಪುನಶ್ಚೇತನಕ್ಕೆ ಅನುಸರಿಸಬೇಕಾದ ದೀರ್ಘಾವಧಿ ಹಾಗೂ ಅಲ್ಪಾವಧಿ ವಿಧಾನಗಳನ್ನೊಳಗೊಂಡ ಮಧ್ಯಂತರ ವರದಿ ಸಲ್ಲಿಸಲು 45 ದಿನ ಕಾಲಾವಕಾಶ ನೀಡುವಂತೆ ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ಹೈಕೋರ್ಟ್‌ಗೆ ಮನವಿ ಮಾಡಿದೆ.
ವೃಷಭಾವತಿ ನದಿ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ನೀರಿ ಈ ಮನವಿ ಮಾಡಿದೆ.
ನೀರಿ ಪರ ವಕೀಲರು ಮೆಮೋ ಸಲ್ಲಿಸಿ, ಕಳೆದ ಡಿ.18ರಿಂದ ಸತತವಾಗಿ ವೃಷಭಾವತಿ ನದಿಗೆ ನೀರು ಹರಿಯುವ ಎಲ್ಲ ಮಾರ್ಗಗಳಿಂದ (ಸ್ಟ್ರೀಮ್) ನೀರಿನ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದ್ದು, ಪ್ರಾಥಮಿಕ, ದ್ವಿತೀಯ ಹಾಗೂ ತೃತೀಯ ಸ್ಟ್ರೀಮ್‌ಗಳಿಂದ ಈವರೆಗೂ 262 ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದೆ.