ಬೆಂಗಳೂರು:ಕೇಂದ್ರದ ಆರ್ಥಿಕ ಪರಿಸ್ಥಿತಿ ಡೋಲಾಯಮಾನವಾಗಿದ್ದು, ಇದೊಂದು ನಿರಾಶಾದಾಯಕ ಬಜೆಟ್ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಗ್ರಪ್ಪ, ಜಿಡಿಪಿ ದರ ತೀರ ಕೆಳಗೆ ಕುಸಿದಿದೆ. ಹಸಿವಿನಿಂದ ನರಳುತ್ತಿರುವವರ ಪಟ್ಟಿಯಲ್ಲಿ ಭಾರತಕ್ಕೆ 103ನೇ ಸ್ಥಾನವಿದೆ. ಪ್ರಜಾಪ್ರಭುತ್ವ ಕುಸಿಯುತ್ತಿರುವ ರಾಷ್ಟ್ರಗಳಲ್ಲಿ ಭಾರತ 51 ನೇ ಸ್ಥಾನದಲ್ಲಿದೆ. ಬಡತನದ ಪ್ರಮಾಣ ನಾಲ್ಕು ಪಟ್ಟು ಹೆಚ್ಚಾಗಿದೆ. ಕೈಗಾರಿಕೋದ್ಯಮ ತೀವ್ರ ಕುಂಠಿತಗೊಂಡಿದೆ. ಒಂದು ಕೋಟಿಗೂ ಹೆಚ್ಚು ಉದ್ಯೋಗ ನಷ್ಟವಾಗಿದೆ. ದೇಶದ ಅನೇಕ ರಾಜ್ಯಗಳಲ್ಲಿ ರೈತರು ಕೆಟ್ಟ ಸ್ಥಿತಿಯಲ್ಲಿದ್ದಾರೆ. ರೈತರು ಬೆಳೆದ ಪದಾರ್ಥದ ಬೆಲೆ ಕುಸಿದಿದೆ. ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ. ಅಭಿವೃದ್ಧಿ ಪೂರಕವಲ್ಲದ ಬಜೆಟ್ ಅಂದ್ರೆ ತಪ್ಪಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಂಸದ ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
2 ಕೋಟಿ ಉದ್ಯೋಗ ಸೃಷ್ಟಿ ಎಲ್ಲಿದೆ?
ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ. ಹಿಟ್ಲರ್ನ ಗೋಬಸ್ ಥಿಯರಿಯಂತಾಗಿದೆ ಮೋದಿ ನಿಲುವು. ಸುಳ್ಳು ಹೇಳುವುದೇ ಅವರ ಕಾಯಕವಾಗಿದೆ. ದೇಶ ಪ್ರೇಮದ ಬಗ್ಗೆ ಬಿಜೆಪಿಯವರು ಮಾತನಾಡ್ತಾರೆ. ಆದರೆ ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾತನಾಡಲ್ಲ. ರಾಜ್ಯಕ್ಕೆ ಬಜೆಟ್ನಲ್ಲಿ ಯಾವುದೇ ಹೊಸ ಕೊಡುಗೆಯಿಲ್ಲ ಎಂದರು.