ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ (ಬಿಇಎಲ್) ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆ ನೇಮಕಾತಿ ಇರಲಿದ್ದು, ನೇರ ಸಂದರ್ಶನದ ಮೂಲಕ ಭರ್ತಿ ಪ್ರಕ್ರಿಯೆ ನಡೆಯಲಿದೆ.
ಹುದ್ದೆ ವಿವರ:ಒಟ್ಟು 81 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ವಿವರ.
- ಪದವೀಧರ ಅಪ್ರೆಂಟಿಸ್ - 63
- ತಾಂತ್ರಿಕ (ಡಿಪ್ಲೊಮಾ) ಅಪ್ರೆಂಟಿಸ್ - 10
- ಬಿಕಾಂ ಅಪ್ರೆಂಟಿಸ್ - 8
ವಿದ್ಯಾರ್ಹತೆ: ಪದವೀಧರ ಅಪ್ರೆಂಟಿಸ್ಗೆ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್, ಮೆಕಾನಿಕ್ ಇಂಜಿನಿಯರಿಂಗ್, ಕಂಪ್ಯೂಟರ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್ನಲ್ಲಿ ಬಿಇ ಪದವಿಯನ್ನು ಪಡೆದಿರಬೇಕು.
ತಾಂತ್ರಿಕ (ಡಿಪ್ಲೊಮಾ) ಅಪ್ರೆಂಟಿಸ್:ಈ ಹುದ್ದೆಗೆ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪದವೀಧರರಾಗಿರಬೇಕು.
ಬಿಕಾಂ ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳು ಬಿಕಾಂ ಪದವಿ ಪೂರ್ಣಗೊಳಿಸಿರಬೇಕು.