ಬೆಂಗಳೂರು: ಅಧಿಕಾರ ದುರ್ಬಳಕೆ ಮಾಡಿಕೊಂಡು ವಕ್ಫ್ ಮಂಡಳಿಯಿಂದ ಹಣ ಮಂಜೂರು ಮಾಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಮಂಡಳಿ ಸದಸ್ಯ ಎನ್.ಕೆ.ಮಹಮ್ಮದ್ ಶಫಿ ಸಾದಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಈ ಕುರಿತು ಬೆಂಗಳೂರು ನಗರ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಯಾಜ್ ಅಹ್ಮದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸರ್ಕಾರದ ಪರ ವಕೀಲರು ವಾದಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫಿ ಸಾದಿ ಅವರಿಗೆ ಆ. 2ರಂದು ಶೋಕಾಸ್ ನೋಟಿಸ್ ಜಾರಿಗೊಳಿಸಿ 7 ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಶಾಫಿ ಸಾದಿ ಪರ ವಕೀಲರು ವಾದಿಸಿ, ಶಾಸನಾತ್ಮಕ ಕಾನೂನಿನಡಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಶಾಸನಾತ್ಮಕ ಕಾನೂನು ಅನುಸಾರವೇ ತನಿಖೆ ನಡೆಯಲಿದೆ. ವಿಚಾರಣೆಗೆ ಪರಿಗಣಿಸಲು ಅರ್ಜಿಯಲ್ಲಿ ಏನೂ ಉಳಿದಿಲ್ಲ. ಹಾಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು. ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲ ಶ್ರೀಧರಪ್ರಭು ತನಿಖೆಗೆ ಹಿಂಜರಿಯುತ್ತಿರುವುದೇಕೆ ಎಂದು ಪ್ರಶ್ನಿಸಿದರು.
ಓದಿ: ಜಮೀರ್ ನಿವಾಸದ ಮೇಲೆ ಐಟಿ ದಾಳಿ.. ನಾನು ಇಡಿ, ಐಟಿ ಆಫೀಸರ್ ಅಲ್ಲ: ಸಿಎಂ ಬೊಮ್ಮಾಯಿ