ಬೆಂಗಳೂರು:ಜಲಮಂಡಳಿ ನೌಕರನೊಬ್ಬ ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ನೇಣಿಗೆ ಶರಣಾಗಿದ್ದಾನೆ.
ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ನೌಕರ...! - employee suicide banglore
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಇರುವ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಜಲಮಂಡಳಿ ನೌಕರನೊಬ್ಬ ನೇಣಿಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ಆತ್ಮಹತ್ಯೆಗೆ ಶರಣಾದ ನೌಕರ
ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ 33 ವರ್ಷದ ನಾಗರಾಜ್ ಎಂಬಾತ ನೇಣು ಹಾಕಿಕೊಂಡಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಇರುವ ಕೇಂದ್ರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜ್ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Last Updated : Dec 2, 2020, 6:59 PM IST