ಬೆಂಗಳೂರು:ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮುಂಗಾರು ಮಳೆ ಹೆಚ್ಚಾದ ಕಾರಣ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ.
ರಾಜ್ಯದಲ್ಲಿ ಅಬ್ಬರಿಸಿದ ವರುಣ: ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ - ಕರ್ನಾಟಕ ಮಳೆ
ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಮುಂದುವರೆದಿದೆ. ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಈಗಾಗಲೇ ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆ ಕಾಣುತ್ತಿದೆ.
ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ
ಅಲ್ಲದೆ ಮಲೆನಾಡು, ಕರಾವಳಿ ಭಾಗದಲ್ಲಿರುವ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ರಾಜ್ಯದ ಪ್ರಮುಖ ಅಣೆಕಟ್ಟೆಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದ್ದು, ಯಾವ ಯಾವ ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದ ನೀರಿದೆ ಎಂಬುದರ ಕುರಿತ ವಿಸ್ತೃತ ಮಾಹಿತಿ ಇಂತಿದೆ.
Last Updated : Jul 24, 2021, 1:28 PM IST