ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ಆನಂದ ರಾವ್ ವೃತ್ತದಲ್ಲಿರುವ ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಕಚೇರಿಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ಕೊರೊನಾ ಭೀತಿ: ಬೆಂಗಳೂರಿನ ಜಲಸಂಪನ್ಮೂಲ ಇಲಾಖೆ ಕಚೇರಿ ಸೀಲ್ ಡೌನ್! - Corona case in Bengaluru
ಕೊರೊನಾ ಭೀತಿ ಹಿನ್ನೆಲೆ ಆನಂದ ರಾವ್ ವೃತ್ತದಲ್ಲಿರುವ ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಕಚೇರಿಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ಬೆಂಗಳೂರಿನ ಜಲಸಂಪನ್ಮೂಲ ಇಲಾಖೆ ಕಚೇರಿ ಸೀಲ್ ಡೌನ್!
ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರ ಪತ್ನಿಗೆ ಕೊವಿಡ್-19 ಪಾಸಿಟಿವ್ ಬಂದಿರುವುದು ವರದಿಯಾಗಿದೆ. ಸಿಬ್ಬಂದಿ ಪತ್ನಿ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಚೇರಿ ಸೀಲ್ ಡೌನ್ ಮಾಡಲಾಗಿದೆ.
ಸಿಬ್ಬಂದಿಯ ಕೋವಿಡ್-19 ಪರೀಕ್ಷೆ ನಡೆಸಬೇಕಿದೆ. ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಈ ಕಚೇರಿಯನ್ನು ನಾಳೆಯಿಂದ ಜುಲೈ 7ರವರೆಗೆ ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ.