ಕರ್ನಾಟಕ

karnataka

ETV Bharat / state

ಲೋಕಸಭೆ ಚುನಾವಣೆ: ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ- ರಮೇಶ್ ಜಾರಕಿಹೊಳಿ - ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್

B.Y.Vijayendra met Ramesh Jarakiholi: ನಾವು ಮನುಷ್ಯರಲ್ವಾ?, ನಮಗೂ ಅಸಮಾಧಾನ ಇತ್ತು. ಈಗ ಅಸಮಾಧಾನ ಇಲ್ಲ, ಎಲ್ಲವೂ ಸರಿಯಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

B Y Vijayendra met Ramesh Jarakiholi
ರಮೇಶ್​ ಜಾರಕಿಹೊಳಿ ಅವರನ್ನು ಭೇಟಿಯಾದ ಬಿ ವೈ ವಿಜಯೇಂದ್ರ

By ETV Bharat Karnataka Team

Published : Nov 23, 2023, 2:09 PM IST

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಭೇಟಿ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ನೋವು ಏನು ಅಂತ ಈಗ ಹೇಳೋದಕ್ಕೆ ಬರಲ್ಲ. ನಾವು ಇಬ್ಬರೂ ಸೇರಿ ಚರ್ಚೆ ಮಾಡಿದ್ದೇವೆ. ನಾಲ್ಕು ಗೋಡೆಗಳ ಮಧ್ಯೆ ಮಾಡಿದ ಚರ್ಚೆಯನ್ನು ಬಹಿರಂಗವಾಗಿ ಹೇಳಲ್ಲ. ವಿಜಯೇಂದ್ರ ಅವರು ಈಗ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಅವರ ಬಗ್ಗೆ ನಾವು ಪ್ರಶ್ನೆ ಮಾಡಲ್ಲ. ನಿನ್ನೆ ನಾನು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಶಾಸಕ ಸುನೀಲ್ ಕುಮಾರ್ ಅವರು ಸೇರಿ ಚರ್ಚೆ ಮಾಡಿ, ಸಹಕಾರ ಕೊಡಲು ನಿರ್ಣಯ ತೆಗೆದುಕೊಂಡಿದ್ದೇವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ ಎಂದರು.

ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ಬಳಿಕ ಇವತ್ತು ನಮ್ಮ ಬಳಿ ಬಂದಿದ್ದಾರೆ. ಎಲ್ಲವೂ ಈಗ ಸರಿಯಾಗಿದೆ. ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತೇವೆ. ನಾವು ಅಸಮಾಧಾನ ತೋರಿಸಲ್ಲ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ, ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕರಾಗಿ ಒಪ್ಪಿಕೊಂಡಿದ್ದೇವೆ. ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಸಹಕಾರ ಕೊಡುತ್ತೇವೆ. ಬಿಜೆಪಿಯಲ್ಲಿ ಪಕ್ಷ ಸಂಘಟನೆ ಶುರು ಮಾಡುತ್ತೇವೆ. ಅಸಮಾಧಾನ ಇತ್ತು, ನಾವೂ ಮನುಷ್ಯರೇ ಅಲ್ವಾ?. ಈಗ ನಮ್ಮ ಟಾಸ್ಕ್ ಮೋದಿಯವರನ್ನು ಮತ್ತೆ ದೇಶದ ಪ್ರಧಾನಿ ಮಾಡೋದು. ಈಗ ಅಸಮಧಾನ ಇಲ್ಲ, ಎಲ್ಲವೂ ಸರಿ ಹೋಗಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆವರೆಗೂ ಅಸಮಾಧಾನ ತೋರಿಸಲ್ಲ:ಲೋಕಸಭೆ ಚುನಾವಣೆಗೆ ಬೆಳಗಾವಿ ಕ್ಷೇತ್ರದಿಂದ ಅಭ್ಯರ್ಥಿ ಯಾರು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್ ನಿರ್ಣಯ ಮಾಡುತ್ತದೆ. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡಲ್ಲ. ಆರ್.ಅಶೋಕ್, ವಿಜಯೇಂದ್ರ ಇಬ್ಬರನ್ನೂ ನಾವು ಸ್ವಾಗತ ಮಾಡಬೇಕಾಗುತ್ತದೆ. ಅವರಿಬ್ಬರ ಆಯ್ಕೆ ಹೈಕಮಾಂಡ್ ನಿರ್ಧಾರವಾಗಿದೆ. ನಾವು ಒಪ್ಪಿಕೊಂಡು ಕೆಲಸ ಮಾಡಬೇಕಾಗುತ್ತದೆ. ಅಸಮಾಧಾನ ತೋರಿಸಲ್ಲ. ಲೋಕಸಭೆ ಚುನಾವಣೆವರೆಗೂ ಅಸಮಾಧಾನ ತೋರಿಸಲ್ಲ. ಈಗ ಸದ್ಯಕ್ಕೆ ಏನೂ ಮಾತಾಡದಂತೆ ಹೇಳಿದ್ದಾರೆ. ಏನೇ ಇದ್ರೂ ಲೋಕಸಭೆ ಚುನಾವಣೆ ನಂತರ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ:ಡಿಸೆಂಬರ್ 6ರ ನಂತರ ನನಗಾದ ನೋವು ವಿವರಿಸುತ್ತೇನೆ: ವಿ.ಸೋಮಣ್ಣ

ABOUT THE AUTHOR

...view details