ಕರ್ನಾಟಕ

karnataka

ETV Bharat / state

ಹಿಜಾಬ್‌ ಧರಿಸಿ ಪರೀಕ್ಷಾ ಕಾರ್ಯ ನಿರ್ವಹಿಸಲು ಶಾಲಾ-ಕಾಲೇಜು ಶಿಕ್ಷಕರಿಗೆ ಅವಕಾಶವಿಲ್ಲ : ಸಚಿವ ನಾಗೇಶ್ - ಶಿಕ್ಷಕರೂ ಕೂಡ ನೈತಿಕ ದೃಷ್ಟಿಯಿಂದ ಹಿಜಾಬ್ ಧರಿಸಬಾರದು ಎಂದ ಶಿಕ್ಷಣ ಸಚಿವರು

ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದ್ರೆ, ಪರೀಕ್ಷಾ ಕೊಠಡಿ ಒಳಗೆ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಲಾಗಿಲ್ಲ. ಹಾಗಾಗಿ ಶಿಕ್ಷಕರೂ ಕೂಡ ನೈತಿಕ ದೃಷ್ಟಿಯಿಂದ ಹಿಜಾಬ್ ಧರಿಸಬಾರದು. ಒಂದು ವೇಳೆ ಹಿಜಾಬ್ ಧರಿಸಿ ಪರೀಕ್ಷಾ ಕೆಲಸ ಕಾರ್ಯದಲ್ಲಿ ತೊಡಗುತ್ತೇವೆ ಎಂದರೆ ಅವರನ್ನು ಪರೀಕ್ಷಾ ಕೆಲಸದಿಂದ ವಿಮುಕ್ತಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.

ಬಿ.ಸಿ.ನಾಗೇಶ್
ಬಿ.ಸಿ.ನಾಗೇಶ್

By

Published : Apr 4, 2022, 9:12 PM IST

ಬೆಂಗಳೂರು:ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಹಿಜಾಬ್‌ ಧರಿಸಿ ಪರೀಕ್ಷಾ ಕಾರ್ಯ ನಿರ್ವಹಿಸಲು ಯಾವುದೇ ಶಾಲಾ-ಕಾಲೇಜು ಶಿಕ್ಷಕರಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ. ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದ್ರೆ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಹಾಕಲು ಅವಕಾಶವಿಲ್ಲ ಎಂದಿದ್ದಾರೆ.

ನೈತಿಕ ದೃಷ್ಟಿಯಿಂದ ಶಿಕ್ಷಕರು ಕೂಡ ಹಿಜಾಬ್ ಧರಿಸಬಾರದು. ಹಾಗಂತ ನಾವೇನೂ ಶಿಕ್ಷಕರನ್ನು ಹಿಜಾಬ್​ ಧರಿಸಬೇಡಿ ಎಂದು ಒತ್ತಾಯಿಸುವುದಿಲ್ಲ. ಒಂದು ವೇಳೆ ಅವರು ಧರಿಸುವುದಾದ್ರೆ, ನಾವು ಅವರನ್ನು ಪರೀಕ್ಷಾ ಕೆಲಸದಿಂದ ವಿಮುಕ್ತಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ. ಇದೀಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಏಪ್ರಿಲ್ ಮಧ್ಯದವರೆಗೆ ಮುಂದುವರಿಯುತ್ತದೆ. ಮತ್ತೊಂದೆಡೆ, ಈ ತಿಂಗಳ ಕೊನೆಯಲ್ಲಿ ಪಿಯು ಪರೀಕ್ಷೆಗಳು ಸಹ ಪ್ರಾರಂಭವಾಗುತ್ತವೆ.

ಇದನ್ನೂ ಓದಿ:ಪಾಟ್ನಾದಲ್ಲಿದೆ ಡೀಸೆಲ್ ಎಂಜಿನ್ ಬುಲೆಟ್ : ಒಂದು ಲೀಟರ್​ಗೆ 80 ಕಿ.ಮೀ ಮೈಲೇಜ್

ಕಳೆದ ವಾರ ಮೈಸೂರಿನಲ್ಲಿ ಶಿಕ್ಷಕಿಯೊಬ್ಬರು ಹಿಜಾಬ್ ಧರಿಸಿ ಪರೀಕ್ಷಾ ಕಾರ್ಯ ಮಾಡುವುದಾಗಿ ಹೇಳಿದ್ದರಿಂದ, ಅವರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಿರಲಿಲ್ಲ. ರಾಜ್ಯಾದ್ಯಂತ, ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರನ್ನು ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

For All Latest Updates

TAGGED:

ABOUT THE AUTHOR

...view details