ಕರ್ನಾಟಕ

karnataka

ETV Bharat / state

ನಾವು ಅಗತ್ಯ ಸಲಹೆ ನೀಡಲು ಸಿದ್ಧ, ನಮ್ಮನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸಿ: ದಿನೇಶ್ ಗುಂಡೂರಾವ್ - ನಮ್ಮನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸಿ'

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕಾಂಗ್ರೆಸ್ ಪಕ್ಷವನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿ. ನಾವೂ ಕೂಡ ಅಗತ್ಯ ಸಲಹೆ ನೀಡಲು ಸಿದ್ಧವಿದ್ದೇವೆ. ಸೋಂಕಿನ ವಿರುದ್ಧ ಯಶಸ್ವಿ ಹೋರಾಟಕ್ಕೆ ಸಜ್ಜಾಗೋಣ ಎಂದು ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.

Dinesh Gundurao
ದಿನೇಶ್ ಗುಂಡೂರಾವ್

By

Published : Mar 29, 2020, 1:56 PM IST

ಬೆಂಗಳೂರು:ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಮುಂದಿನ ಹದಿನೈದು ದಿನ ಕೊಳಗೇರಿ ನಿವಾಸಿಗಳಿಗೆ ಉಚಿತ ಆಹಾರ ವಿತರಿಸಬೇಕೆಂದು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯವು ಕೊರೊನಾ ವಿರುದ್ಧ ಗಂಭೀರ ಹೋರಾಟ ನಡೆಸುತ್ತಿದೆ. ಕೊಳಗೇರಿಗಳು ಮತ್ತು ವಲಸಿಗರಲ್ಲಿ ಬಡ ಜನರು ಅಪಾರ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಮುಂದಿನ 15 ದಿನಗಳವರೆಗೆ ಎಲ್ಲಾ ಕೊಳಗೇರಿ ನಿವಾಸಿಗಳಿಗೆ ಆಹಾರ ಪೊಟ್ಟಣಗಳನ್ನು ತಕ್ಷಣ ಒದಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸಚಿವ ಆರ್.ಅಶೋಕ್ ಹಾಗೂ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್​​ರನ್ನು ಒತ್ತಾಯಿಸುತ್ತೇನೆ. ಇದಕ್ಕೆ ಸುಮಾರು 50 ಕೋಟಿ ರೂಪಾಯಿ ಮೊತ್ತದ ಅಗತ್ಯವಿರಬಹುದು ಎಂದಿದ್ದಾರೆ.

ಕೋವಿಡ್ -19 ವಿರುದ್ಧ ಹೋರಾಡಲೇಬೇಕಿದೆ. ಇದರಿಂದ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ನೀವು ತ್ವರಿತ, ಸೃಜನಶೀಲ ಪರಿಹಾರವನ್ನು ಹೊಂದಿದ್ದೀರಾ? ಎಂದು ಪ್ರಶ್ನಿಸಿರುವ ಅವರು ದೇಶವನ್ನೇ ಬಾಧಿಸುತ್ತಿರುವ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿ. ನಾವು ಕೂಡ ಅಗತ್ಯ ಸಲಹೆ ನೀಡಲು ಸಿದ್ಧವಿದ್ದೇವೆ. ಎಲ್ಲರೂ ಒಟ್ಟಾಗಿ ರೋಗದ ವಿರುದ್ಧ ಯಶಸ್ವಿ ಹೋರಾಟಕ್ಕೆ ಸಜ್ಜಾಗೋಣ ಎಂದು ಕರೆ ಕೊಟ್ಟಿದ್ದಾರೆ.

ABOUT THE AUTHOR

...view details