ಕರ್ನಾಟಕ

karnataka

ETV Bharat / state

ಪಕ್ಷದ ಸಿದ್ಧಾಂತ, ಅಭ್ಯರ್ಥಿ ಆಧರಿಸಿ ಮತ ಕೇಳುತ್ತೇವೆ: ಡಿ.ಕೆ. ಶಿವಕುಮಾರ್ - KPCC President DK Shivakumar

ನಮ್ಮ ಪಕ್ಷದ ಸಿದ್ಧಾಂತ ಮುಂದಿಟ್ಟು ಅಭ್ಯರ್ಥಿಗೆ ಮತ ಕೇಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನ ಪಡೆಯಲಿದೆ ಎಂಬ ಬಿಜೆಪಿ ನಾಯಕ ವಿಜಯೇಂದ್ರ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ.

Banglore
ಪಕ್ಷದ ಸಿದ್ಧಾಂತ, ಅಭ್ಯರ್ಥಿ ಆಧರಿಸಿ ಮತ ಕೇಳುತ್ತೇವೆ: ಡಿ.ಕೆ ಶಿವಕುಮಾರ್

By

Published : Oct 18, 2020, 2:30 PM IST

ಬೆಂಗಳೂರು: 'ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಸಿದ್ಧಾಂತ, ಅಭ್ಯರ್ಥಿಯನ್ನು ಮುಂದಿಟ್ಟು ಮತ ಕೇಳುತ್ತೇವೆ. ಬೇರೆ ಪಕ್ಷಗಳು ಏನು ಮಾಡುತ್ತಿವೆ ಎಂಬುದು ನಮಗೆ ಬೇಕಾಗಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಪಕ್ಷದ ಸಿದ್ಧಾಂತ, ಅಭ್ಯರ್ಥಿ ಆಧರಿಸಿ ಮತ ಕೇಳುತ್ತೇವೆ: ಡಿ.ಕೆ ಶಿವಕುಮಾರ್

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನ ಪಡೆಯಲಿದೆ ಎಂಬ ಬಿಜೆಪಿ ನಾಯಕ ವಿಜಯೇಂದ್ರ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 'ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಅವರಿಗೆ ಶುಭ ಕೋರುತ್ತೇನೆ.' ಯಾರು ಯಾರ ಜೊತೆಯಾದರೂ ನೆಂಟಸ್ಥನ, ಸಂಬಂಧ ಬೆಳಸಲಿ. ಯಾವುದೇ ಮೈತ್ರಿ ಬೇಕಾದರೂ ಮಾಡಿಕೊಳ್ಳಲಿ. ನಾವು ಅದರ ಬಗ್ಗೆ ಚಿಂತಿಸುವುದಿಲ್ಲ. ನಮ್ಮ ಪಕ್ಷದ ಸಿದ್ಧಾಂತ ಮುಂದಿಟ್ಟು ಅಭ್ಯರ್ಥಿಗೆ ಮತ ಕೇಳುತ್ತೇವೆ ಎಂದರು.

ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಕೊರೊನಾ ಸೋಂಕು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಬಿಬಿಎಂಪಿ ಆಯುಕ್ತರು, ಇಲಾಖೆಗಳ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಚಿವರನ್ನು ಬದಲಿಸುವ ಮೂಲಕ ಮುಖ್ಯಮಂತ್ರಿಗಳು ತಮ್ಮ ವೈಫಲ್ಯ ಒಪ್ಪಿಕೊಂಡಿದ್ದಾರೆ. ಸರ್ಕಾರದ ಅಸಮರ್ಥತೆಯಿಂದ ರಾಜ್ಯದ ಜನತೆ ನರಳುವಂತಾಗಿದೆ ಎಂದರು.

ಕಾರ್ತಿ ಚಿದಂಬರಂ ಅವರದ್ದು ಸೌಜನ್ಯದ ಭೇಟಿ: 'ಕಾರ್ತಿ ಚಿದಂಬರಂ ಅವರದ್ದು ಕೇವಲ ಸೌಜನ್ಯದ ಭೇಟಿ. ರಾಜಕೀಯ ವಿಶೇಷತೆಗಳೇನು ಇಲ್ಲ. ಅವರು ನನ್ನ ಸ್ನೇಹಿತರು. ಸಂಸತ್ ಸದಸ್ಯರಾಗಿರುವ ಅವರು ರಾಜಕೀಯವಾಗಿ ಸಹೋದ್ಯೋಗಿ. ಹೀಗಾಗಿ ನಾವು ಭೇಟಿಯಾದಾಗ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತೇವೆ. ತಮಿಳುನಾಡಿನ ಚುನಾವಣೆಗೆ ಸಂಬಂಧಿಸಿದಂತೆ ತೀರ್ಮಾನ ತೆಗೆದುಕೊಳ್ಳಲು ನಮ್ಮ ಹೈಕಮಾಂಡ್ ನಾಯಕರಿದ್ದಾರೆ. ಈ ಚುನಾವಣೆ ಹೇಗೆ ಎದುರಿಸಬೇಕು ಎಂಬುದನ್ನು ಅವರು ನಿರ್ಧರಿಸುತ್ತಾರೆ ಎಂದರು.

ಕಾಂಗ್ರೆಸ್ ಸೇರ್ಪಡೆ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಯಶವಂತಪುರದ ವಿವಿಧ ಪಕ್ಷಗಳ ಮಹಿಳಾ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಭಾನುವಾರ ತಮ್ಮ ಸದಾ ಶಿವನಗರದ ನಿವಾಸದಲ್ಲಿ ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್​​ಗೆ ಬರಮಾಡಿಕೊಂಡರು.

ABOUT THE AUTHOR

...view details