ಕರ್ನಾಟಕ

karnataka

ETV Bharat / state

ಅಧಿವೇಶನ ಮುಂದುವರಿಸುವ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ : ಸಚಿವ ಆರ್‌.ಅಶೋಕ್

10 ದಿನಗಳ ಕಲಾಪವನ್ನು ಇನ್ನಷ್ಟು ದಿನ ಮುಂದುವರಿಸುವ ಬಗ್ಗೆ ವಿಪಕ್ಷಗಳು ಆಗ್ರಹಿಸಿದ ಬೆನ್ನಲ್ಲೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು..

r-ashok
ಸಚಿವ ಆರ್‌.ಅಶೋಕ್

By

Published : Sep 14, 2021, 5:25 PM IST

ಬೆಂಗಳೂರು :ಅಧಿವೇಶನ ಮುಂದುವರಿಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದಾರೆ.

ಕಲಾಪ‌ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಮತ್ತೆ ಕೆಲವು ದಿನ‌ ಅಧಿವೇಶನ ಮುಂದುವರೆಸುವಂತೆ ವಿಪಕ್ಷಗಳು ಒತ್ತಾಯಿಸಿವೆ. ಇದಕ್ಕೆ ಮುಂದಿನ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ಅಧಿವೇಶನ ಮುಂದುವರಿಸುವ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ : ಸಚಿವ ಆರ್‌.ಅಶೋಕ್

ಪ್ರತಿದಿನ ವಿಧೇಯಕಗಳ ಮಂಡನೆ ಮಾಡಲಾಗುತ್ತದೆ. ಅದಕ್ಕೆ ಸಹಕಾರ ನೀಡುವವಂತೆ ಸಿಎಂ ಮನವಿ ಮಾಡಿದ್ದಾರೆ. ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದೆ ಎಂದರು.

ಕಲಾಪ‌ ಸಲಹಾ ಸಮಿತಿ ಸಭೆಯಲ್ಲಿ ಸ್ಪೀಕರ್ ಕಾಗೇರಿ, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕಾನೂನು ಸಚಿವ ಮಾಧುಸ್ವಾಮಿ, ಸಚಿವ ಕೆ ಎಸ್ ಈಶ್ವರಪ್ಪ, ಮುಖ್ಯ ಸಚೇತಕ ಸತೀಶ್ ರೆಡ್ಡಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ, ಕಾಂಗ್ರೆಸ್ ಮುಖ್ಯ ಸಚೇತಕ ಅಜಯ್ ಸಿಂಗ್, ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ವೆಂಕಟರಾವ್ ನಾಡಗೌಡ ಭಾಗವಹಿಸಿದ್ದರು.

ಇದನ್ನೂ ಓದಿ:ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ ಕುರಿತು ಸಿಎಂ ಜೊತೆ ಸಭೆ: ಸಚಿವ ಮುರುಗೇಶ್ ನಿರಾಣಿ

ABOUT THE AUTHOR

...view details