ಬೆಂಗಳೂರು :ಸಿಎಂ ಬಿ.ಎಸ್. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ , ಅದು ಅವರ ವೈಯಕ್ತಿಕ ಜೀವನದಲ್ಲಿ ನಡೆದಿರುವ ಘಟನೆ. ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ನಾನು ಕೆಳಮಟ್ಟದ ರಾಜಕೀಯ ಮಾಡುವುದಿಲ್ಲ: ಹೆಚ್ಡಿಕೆ - ಯೋಗೇಶ್ವರ್
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಷ್ಟು ಕೆಳಮಟ್ಟದ ರಾಜಕೀಯ ನಾನು ಮಾಡಲ್ಲ. ಆದರೆ ಅಲ್ಲಿ (ಬಿಜೆಪಿಯಲ್ಲಿ) ಏನು ನಡೆಯುತ್ತಿದೆ ಎಂಬುದು ನನಗೆ ಗೊತ್ತಿದೆ ಎಂದರು.
ಹೆಚ್ಡಿ ಕುಮಾರಸ್ವಾಮಿ
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಷ್ಟು ಕೆಳಮಟ್ಟದ ರಾಜಕೀಯ ನಾನು ಮಾಡಲ್ಲ. ಆದರೆ ಅಲ್ಲಿ (ಬಿಜೆಪಿಯಲ್ಲಿ) ಏನು ನಡೆಯುತ್ತಿದೆ ಎಂಬುದು ನನಗೆ ಗೊತ್ತಿದೆ ಎಂದರು.
ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆಗೆ ಮನವಿ ಮಾಡಲು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಯಡಿಯೂರಪ್ಪನವರು ರಾಜ್ಯದ ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿಗಳು, ಅವರೊಬ್ಬರಿಗೆ ಸಿಎಂ ಅಲ್ಲ ಎಂದು ಸಿ.ಪಿ. ಯೋಗೇಶ್ವರ್ಗೆ ತಿರುಗೇಟು ನೀಡಿದರು.