ಬೆಂಗಳೂರು: ರಾಮಲಿಂಗಾರೆಡ್ಡಿಯವರ ತ್ಯಾಗ, ಸೇವೆ, ಅನುಭವ ನಮಗ್ಯಾರಿಗೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ರಾಮಲಿಂಗಾರೆಡ್ಡಿಯವರ ತ್ಯಾಗ, ಅನುಭವ ನಮಗಿಲ್ಲ: ಡಿಕೆಶಿ - bengaluru
ರಾಮಲಿಂಗಾರೆಡ್ಡಿ ಹಾಗೂ ಡಿ.ಕೆ.ಶಿವಕುಮಾರ್ ಮೊದಲಿನಿಂದಲೂ ಉತ್ತಮ ಸ್ನೇಹಿತರಾಗಿದ್ದವರು. ಇದೀಗ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ನಾಯಕರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸುತ್ತಿರುವ ಡಿಕೆಶಿ, ಇಂದು ಮಾಜಿ ಸಚಿವ ರಾಮಲಿಂಗಾರೆಡ್ಡಿಯವರ ಮನೆಗೆ ಭೇಟಿ ನೀಡಿದ್ದರು.
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ನಾಯಕರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸುತ್ತಿರುವ ಡಿಕೆಶಿ, ಇಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ಮತ್ತು ರಾಮಲಿಂಗಾರೆಡ್ಡಿ ಆತ್ಮೀಯ ಸ್ನೇಹಿತರು. ನಾವು ಯೂತ್ ಕಾಂಗ್ರೆಸ್ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಏಳು ಬಾರಿ ಇಬ್ಬರೂ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಒಟ್ಟಿಗೆ ವಿಧಾನಸೌಧ ಪ್ರವೇಶ ಮಾಡಿದ್ದೆವು. ರಾಮಲಿಂಗಾರೆಡ್ಡಿ ಮುಂದಿನ ದಿನಗಳಲ್ಲಿ ಬೆಂಗಳೂರಿನ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ ಎಂದರು.
ಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆ ಬಗ್ಗೆ ಮಾತನಾಡಿದ ಅವರು, ನನಗೆ ಸಮಯಾವಕಾಶ ಕಡಿಮೆ ಇದೆ. ಆದರೂ ಎಲ್ಲಾ ಹಿರಿಯರು, ಕಿರಿಯರು ಚರ್ಚೆ ಮಾಡುತ್ತೇವೆ. ಅವರ ಉದ್ದೇಶ ಏನು ಎಂಬುದು ನಮಗೆ ಗೊತ್ತಿದೆ. ಕಾನೂನು ಪ್ರಕಾರ ಏನು ಹೋರಾಟ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ಕೊಟ್ಟರು.