ಬೆಂಗಳೂರು:ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಮುಂದುವರೆದಿದೆ. ಹಲವರನ್ನು ಈಗಾಗಲೇ ಬಂಧಿಸಲಾಗಿದೆ. ನಮಗೆ ಪಿಎಫ್ಐ ಮತ್ತು ಎಸ್ಡಿಪಿಐ ಮೇಲೆ ಅನುಮಾನವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪ್ರವೀಣ್ ಕೊಲೆ ಪ್ರಕರಣ: ಪಿಎಫ್ಐ, ಎಸ್ಡಿಪಿಐ ಮೇಲೆ ಅನುಮಾನವಿದೆ ಎಂದ ಗೃಹ ಸಚಿವರು
ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗಿರುವುದು ಸಹಜ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಅವರು, ಸದ್ಯ ನಾನು ಯಾರ ಬಗ್ಗೆಯೂ ಕಾಮೆಂಟ್ ಮಾಡಲು ಸಾಧ್ಯವಿಲ್ಲ. ಹಾಗಾಗಿ ನಿರ್ದಿಷ್ಟ ವ್ಯಕ್ತಿ ಎಂದು ಹೇಳಲಾಗಲ್ಲ, ಯಾರೇ ಇರಲಿ ಪೊಲೀಸರು ಪತ್ತೆ ಮಾಡುತ್ತಾರೆ. ಕೊಲೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗಿರುವುದು ಸಹಜ. ಪ್ರವೀಣ್ ತುಂಬಾ ಒಳ್ಳೆಯ ವ್ಯಕ್ತಿ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಬಿಜೆಪಿ ಕಾರ್ಯಕರ್ತರು ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ನಾವು ನಿರ್ವಹಿಸುತ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಇದನ್ನೂ ಓದಿ:ಸಾಧನಾ ಸಮಾವೇಶ ದಿಢೀರ್ ರದ್ದು: ಮೊಸರನ್ನ, ಬಾದುಷಾ, ಪಲಾವ್ ಶಾಲೆ-ಹಾಸ್ಟೆಲ್ಗೆ ವಿತರಣೆ