ಕರ್ನಾಟಕ

karnataka

ETV Bharat / state

ವಿ.ಸೋಮಣ್ಣ ಕಾಂಗ್ರೆಸ್ ಸೇರಿದರೆ ನಮ್ಮದೇನು ತಕರಾರಿಲ್ಲ: ಸಚಿವ ಡಾ.ಜಿ. ಪರಮೇಶ್ವರ್

G Parameshwar says about V Somanna joins Congress: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ವಿ ಸೋಮಣ್ಣ ಅವರು ಇತ್ತೀಚೆಗೆ ನಡೆದ ಬಿ ವೈ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿದ್ದರು.

Home Minister Dr. G Parameshwar
ಗೃಹ ಸಚಿವ ಡಾ ಜಿ ಪರಮೇಶ್ವರ್​

By ETV Bharat Karnataka Team

Published : Nov 17, 2023, 4:05 PM IST

ಬೆಂಗಳೂರು: ಮಾಜಿ ಸವಿವ ವಿ. ಸೋಮಣ್ಣ ಕಾಂಗ್ರೆಸ್ ಸೇರಿದರೆ ನಮ್ಮದೇನು ತಕರಾರು ಇಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್​, ಅವರು ಬಂದ್ರೆ ನಾವು ಸ್ವಾಗತ ಮಾಡುತ್ತೇವೆ. ಏನು ಬೆಳವಣಿಗೆ ಆಗುತ್ತಿದೆ ಎಂದು ಗೊತ್ತಿಲ್ಲ. ಸೋಮಣ್ಣ ಅವರು ಬಿಜೆಪಿ ಪ್ರಭಾವಿ ಮುಖಂಡರಾಗಿದ್ದಾರೆ. ಅವರು ಕಾಂಗ್ರೆಸ್​ಗೆ ಬಂದರೆ ಸ್ವಾಗತ ಮಾಡುತ್ತೇವೆ. ರಾಜಕೀಯ ರಂಗದಲ್ಲಿ ಅವರದ್ದೇ ಆದ ಶಕ್ತಿ ಇರುತ್ತದೆ ಎಂದು ತಿಳಿಸಿದರು.

ಪುತ್ತೂರಿನಲ್ಲಿ ಬಜರಂಗದಳದವರ ಗಡಿಪಾರು ಮಾಡಲು ನೋಟಿಸ್ ನೀಡಲಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಯಾರೂ ಸಹ ಕಾನೂನನ್ನು ಹೊರತು ಪಡಿಸಿ ಕೆಲಸ ಮಾಡಲಾಗಲ್ಲ. ಇಲಾಖೆಯಲ್ಲಿ ಬೇರೇನೂ ಕೆಲಸ ಮಾಡಲಾಗಲ್ಲ. ಬಜರಂಗದಳದವರಾಗಲಿ, ಬೇರೆಯವರೇ ಇರಲಿ, ಸಂಘ - ಸಂಸ್ಥೆಗಳಿರಲಿ ಹಾಗೂ ವೈಯಕ್ತಿಕವೇ ಇರಲಿ ಕಾನೂನಿನ ಚೌಕಟ್ಟಿನಲ್ಲಿ ಇದ್ದರೆ ನಮ್ಮ ಸಹಕಾರ ‌ಇರುತ್ತದೆ. ಪೊಲೀಸ್ ಇಲಾಖೆ ಇರೋದು ಯಾಕೆ? ಎಂದು ಪ್ರಶ್ನಿಸಿದರು.

ಪೊಲೀಸ್​ ಇರುವುದು ಕಾನೂನು ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕಾಗಿದೆ. ದುರುದ್ದೇಶದಿಂದ ಯಾವ ಪೊಲೀಸ್ ಕೂಡ ಕ್ರಮ ಕೈಗೊಳ್ಳುವುದಿಲ್ಲ. ನಮ್ಮ ಸರ್ಕಾರ ಇರುವುದು ಶಾಂತಿ ಕಾಪಾಡುವುದಕ್ಕಾಗಿದೆ. ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡಬೇಕು. ಅದು ನಮ್ಮ ಪ್ರಣಾಳಿಕೆಯಲ್ಲಿಯೇ ಇದೆ ಎಂದರು. ಹಿಜಾಬ್ ಧರಿಸಲು ಅವಕಾಶ ವಿಚಾರವಾಗಿ ಪ್ರತಿಕ್ರಿಯಿಸಿ, ಹಿಜಾಬ್ ವಿಚಾರದಲ್ಲಿ ಶಾಂತಿ ಕಾಪಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

ವಿ ಸೋಮಣ್ಣ ಮತ್ತೆ ಕಾಂಗ್ರೆಸ್​ ಸೇರುತ್ತಾರಾ?: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರು, ಬಿ ವೈ ವಿಜಯೇಂದ್ರ ಅವರ ಆಯ್ಕೆಯಿಂದಾಗಿ ಅಸಮಾಧಾನಗೊಂಡಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಥಾನ ಸಿಗದೇ ಇರುವ ಹಿನ್ನೆಲೆ ವಿ ಸೋಮಣ್ಣ ಮತ್ತೆ ಕಾಂಗ್ರೆಸ್​ಗೆ ಸೇರುತ್ತಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. ಅದಕ್ಕೆ ಇಂಬು ನೀಡುವಂತೆ ಇತ್ತೀಚೆಗೆ ಅದ್ಧೂರಿಯಾಗಿಯಾಗಿ ನಡೆದಿದ್ದ, ಬಿ ವೈ ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ನಾಯಕ ವಿ ಸೋಮಣ್ಣ ಅವರು ಗೈರಾಗಿದ್ದರು.

ಇನ್ನೊಂದೆಡೆ ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಗುರುವಾರ ಆಯೋಜನೆ ಮಾಡಿದ್ದ 18ನೇ ವರ್ಷದ ರಮಣಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿ ಸೋಮಣ್ಣ ಅವರು ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ:ಒಂದೇ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ, ಬೊಮ್ಮಾಯಿ, ಸೋಮಣ್ಣ

ABOUT THE AUTHOR

...view details