ಬೆಂಗಳೂರು:ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ ಎಂದು ಪ್ರತಿಪಕ್ಷಗಳ ನಾಯಕರ ಕುರಿತು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.
ನಮ್ಮದು ಜನರಿಂದ ಆಯ್ಕೆಯಾದ ಸರ್ಕಾರ: ಡಿ.ವಿ. ಸದಾನಂದಗೌಡ - ಪ್ರವಾಹ ಪೀಡಿತ ಪರಿಹಾರ ಹಣ
ನಮ್ಮದು ಜನರಿಂದ ಆಯ್ಕೆಯಾದ ಸರ್ಕಾರ. ಜನರಿಗೋಸ್ಕರ ಇರುವ ಸರ್ಕಾರ. ಸಂಕಷ್ಟದಲ್ಲಿರುವವರ ಬೇನೆ ಬಗ್ಗೆ ನಮಗೆ ಅರಿವಿದೆ. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಇಲ್ಲ. ಆದ್ರೆ ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ-ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ ಎಂದು ಪ್ರತಿಪಕ್ಷಗಳ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.
![ನಮ್ಮದು ಜನರಿಂದ ಆಯ್ಕೆಯಾದ ಸರ್ಕಾರ: ಡಿ.ವಿ. ಸದಾನಂದಗೌಡ](https://etvbharatimages.akamaized.net/etvbharat/prod-images/768-512-4620914-thumbnail-3x2-sada.jpg)
ಪ್ರವಾಹ ಪೀಡಿತ ಪ್ರದೇಶದಲ್ಲಿ ತಕ್ಷಣ ಪರಿಹಾರ, ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಿರುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಮಾಹಿತಿ ನೀಡಿದ್ದಾರೆ. ಪ್ರವಾಹದಿಂದ ತೊಂದರೆಗೀಡಾದವರಿಗೆ ತಕ್ಷಣ ಕೊಡಬೇಕಾದ ಪರಿಹಾರವನ್ನು ನಮ್ಮ ರಾಜ್ಯ ಸರ್ಕಾರ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ಈಗಾಗಲೇ ಕೈಗೊಂಡಿದೆ. ಉಳಿದ ಮಧ್ಯಂತರ ಮತ್ತು ದೀರ್ಘ ಕಾಲೀನ ಪರಿಹಾರದ ಬಗ್ಗೆ ಸಧ್ಯದಲ್ಲೇ ವರದಿ ಆಧರಿಸಿ ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ ಆಗಲಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ನಮ್ಮದು ಜನರಿಂದ ಆಯ್ಕೆಯಾದ ಸರ್ಕಾರ. ಜನರಿಗೋಸ್ಕರ ಇರುವ ಸರ್ಕಾರ. ಸಂಕಷ್ಟದಲ್ಲಿರುವವರ ಬೇನೆ ಬಗ್ಗೆ ನಮಗೆ ಅರಿವಿದೆ. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಇಲ್ಲ. ಈ ಬಗ್ಗೆ ನಾನು ನಿರಂತರವಾಗಿ ಕೇಂದ್ರ ಸರ್ಕಾರದ ಇಲಾಖೆಗಳ ಸಚಿವರ ಸಂಪರ್ಕದಲ್ಲಿದ್ದೇನೆ. ಇದೆಲ್ಲಕ್ಕಿಂತ ಹೆಚ್ಚಾಗಿ ನೊಂದವರ ಪರ ಜವಾಬ್ದಾರಿಯಿಂದ ವಿಮುಖವಾಗುವ ಪ್ರಶ್ನೆಯೇ ಇಲ್ಲವೆಂದು ಸದಾನಂದ ಗೌಡರು ಸ್ಪಷ್ಟಪಡಿಸಿದ್ದಾರೆ.