ಬೆಂಗಳೂರು:ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತ ಗೊಂದಲ ಮುಂದುವರೆದಿದ್ದು, ಹೈಕಮಾಂಡ್ ಅನುಮತಿಗಾಗಿ ಕಾದು ನೋಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಚಿತ್ರದುರ್ಗ ಪ್ರವಾಸಕ್ಕೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ. ಆದ್ರೆ ಏನು ಮಾಡಲು ಸಾಧ್ಯವಿಲ್ಲ, ಕಾಯೋಣ, ನಾವು ನೀವು ಇಬ್ಬರೂ ಕಾಯಲೇಬೇಕು ಎಂದರು.
ಸಿಎಂ ಪ್ರವಾಸ:
ಇಂದು ಚಿತ್ರದುರ್ಗದ ಮುರುಘರಾಜೇಂದ್ರ ಮಠದಲ್ಲಿ ಮುರುಘಾಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯ ಲೋಕಾರ್ಪಣೆ ಹಾಗೂ ಉತ್ತರದಿಕ್ಕಿನ ಶೀಲಾ ಮಂಟಪದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿರುವ ಸಿಎಂ 11.15 ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ ಸಹ್ಯಾದ್ರಿ ಕಲಾ ಕಾಲೇಜಿನ ದ್ವಾರ ಮತ್ತು ಪುರುಷ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಪುಟ ವಿಸ್ತರಣೆಗೆ ಕಾಯಲೇಬೇಕು: ಸಿಎಂ ಯಡಿಯೂರಪ್ಪ ಪುನರುಚ್ಛಾರ - yadiyurappa statement about cabinet expansion
ಸಂಪುಟ ವಿಸ್ತರಣೆಗೆ ಇನ್ನೂ ತಡವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಹೈಕಮಾಂಡ್ ಅನುಮತಿಗಾಗಿ ಕಾದು ನೋಡಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಳೂರು
ಮಧ್ಯಾಹ್ನ 12.30 ಕಿಮ್ಮನೆ ಗಾಲ್ಫ್ ರೆಸಾರ್ಟ್ ಉದ್ಘಾಟನೆ ಮಾಡಲಿದ್ದಾರೆ, ಸಂಜೆ 5.20 ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ.