ಕರ್ನಾಟಕ

karnataka

ETV Bharat / state

ಕಳೆದ 12-13 ದಿನಗಳಲ್ಲಿ ರಾಜ್ಯಕ್ಕೆ ಬಂದ ವಿದೇಶಿ ಪ್ರಯಾಣಿಕರ ಮೇಲೆ ನಿಗಾ : ಸಚಿವ ಸುಧಾಕರ್ - ರಾಜ್ಯದಲ್ಲಿ ವಿದೇಶಿಗಳ ಮೇಲೆ ನಿಗಾವಹಿಸಿದ ಸರ್ಕಾರ

ದಕ್ಷಿಣ ಆಫ್ರಿಕಾ ಸೇರಿದಂತೆ 12 ದೇಶಗಳಲ್ಲಿ ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್ ವೈರಾಣು ಪತ್ತೆಯಾಗಿದ್ದು, ಈ ಸಂಬಂಧ ರಾಜ್ಯಕ್ಕೆ ಬರುವ ವಿದೇಶಿಗರ ಮೇಲೆ ತೀವ್ರ ನಿಗಾ ಇಡಲಾಗಿದೆ.

Health Minister Sudhakar
ಆರೋಗ್ಯ ಸಚಿವ ಸುಧಾಕರ್

By

Published : Nov 29, 2021, 3:45 PM IST

ಬೆಂಗಳೂರು :ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್ ವೈರಾಣು ಸುಮಾರು 12 ದೇಶಗಳಲ್ಲಿ ಕಂಡು ಬಂದಿದೆ. ಕಳೆದ 12-13 ದಿನಗಳಲ್ಲಿ ದಕ್ಷಿಣಆಫ್ರಿಕಾ ಸೇರಿದಂತೆ ಹಲವು ದೇಶಗಳಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಿ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಮಿಕ್ರೋನ್​​​ ವೈರಾಣು ಹಿಂದೆ ನಾಲ್ಕು ದೇಶಗಳಲ್ಲಿ ಕಂಡು ಬಂದಿತ್ತು. ಈಗ ಒಟ್ಟು 12 ದೇಶಗಳಲ್ಲಿ ಪತ್ತೆಯಾಗಿದೆ. ದೇಶದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ರಾಜ್ಯ ಸರ್ಕಾರ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ನಾಳೆ ಆರೋಗ್ಯ ಇಲಾಖೆಯಿಂದ ವಿಶೇಷ ಸಭೆ ನಡೆಯಲಿದ್ದು, ಎಲ್ಲಾ ಹಿರಿಯ ಅಧಿಕಾರಿಗಳು, ವೈದ್ಯರು, ತಾಂತ್ರಿಕ ಸಲಹಾ ಸಮಿತಿ ತಜ್ಞರು ಪಾಲ್ಗೊಳ್ಳಲಿದ್ದಾರೆ. ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಸರ್ಕಾರ ನೀಡುವ ಮಾರ್ಗಸೂಚಿ, ಅದರ ಪಾಲನೆ ಹೇಗಾಗಬೇಕು ಎಂಬುದರ ಬಗ್ಗೆ ಇಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.

ಕೋವಿಡ್‌ನಿಂದ ಈಗಾಗಲೇ ಜನರು ನೊಂದಿದ್ದು, ಬಹಳ ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಜನರು ಆತಂಕಕ್ಕೆ ಒಳಗಾಗುವಂತೆ ಮಾಡಬಾರದು. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳು ತಪ್ಪು ಸುದ್ದಿ ಹರಡಬಾರದು. ಲಾಕ್​​​ಡೌನ್ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಹೀಗಾಗಿ ಆ ಬಗ್ಗೆ ಹೆದರಿಸುವ ಕೆಲಸ ಆಗಬಾರದು. ಆದರೆ ವೈರಾಣು ಕುರಿತು ಜಾಗೃತಿ ಕಾರ್ಯಗಳು ಹೆಚ್ಚಾಗಿ ನಡೆಯಬೇಕು. ಹೊಸ ವೈರಾಣು ಡೆಲ್ಟಾ ರೂಪಾಂತರಿಯಷ್ಟು ಅಪಾಯಕಾರಿ ಅಲ್ಲ ಎಂದು ಕೆಲ ತಜ್ಞರು ತಿಳಿಸಿದ್ದಾರೆ. ಆದರೆ ವೈರಾಣು ವರ್ತನೆ ಬಗ್ಗೆ ಜಿನೊಮಿಕ್ ಸೀಕ್ವೆನ್ಸಿಂಗ್ ಆದ ನಂತರ ನಿಖರ ಮಾಹಿತಿ ಲಭ್ಯವಾಗಲಿದೆ. ಡಿ.01 ರ ನಂತರ ಒಮಿಕ್ರೋನ್ ಅಧ್ಯಯನದ ವಿವರಗಳು ದೊರೆಯಲಿವೆ ಎಂದು ಹೇಳಿದರು.

ಪರಿಷತ್​ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಮ್ಮ ಭಾಗದಲ್ಲಿ ಬಿಜೆಪಿಗೆ ಬಹಳ ಕಡಿಮೆ ಸಂಖ್ಯೆಯ ಶಾಸಕರಿರುವುದು ದೊಡ್ಡ ಸವಾಲಾಗಿದೆ. ಈ ಸವಾಲನ್ನು ನಿಭಾಯಿಸಿ, ವಿಧಾನಪರಿಷತ್ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ಬಗೆಯ ಪ್ರಯತ್ನ ಮಾಡಲಾಗಿದೆ. ಗ್ರಾಮ ಪಂಚಾಯತ್​ ಸದಸ್ಯರು ಬಿಜೆಪಿಯ ಆಡಳಿತವನ್ನು ಮೆಚ್ಚಿ ಪಕ್ಷಕ್ಕೆ ಅವಕಾಶ ನೀಡುವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕೋಲಾರದಲ್ಲಿ ಈ ಬಾರಿ ಅಚ್ಚರಿ ಎನಿಸುವ ಫಲಿತಾಂಶ ಬರಬಹುದು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ವಿದೇಶಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್​ ಕಡ್ಡಾಯ: ಸಿಎಂ ಬಸವರಾಜ ಬೊಮ್ಮಾಯಿ

ABOUT THE AUTHOR

...view details