ಕರ್ನಾಟಕ

karnataka

ETV Bharat / state

ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕೆಂದು ನಮಗೆ ಗೊತ್ತಿದೆ: ಹೈಕೋರ್ಟ್

ಇಡೀ ಜಿಲ್ಲೆಯ ರಸ್ತೆಗಳು ದುಸ್ಥಿತಿಯಲ್ಲಿವೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ. ಇವೆಲ್ಲಾ ನೋಡಿದರೆ, ಅಧಿಕಾರಿಗಳು ಸರ್ಕಾರದ ಮಾತು ಕೇಳುತ್ತಿಲ್ಲ ಎನ್ನಿಸುತ್ತದೆ. ಸದ್ಯಕ್ಕೆ ಬೆಂಗಳೂರಲ್ಲಿ ಬಿಟ್ಟು ರಾಜ್ಯದ ಬೇರೆಲ್ಲೂ ಮಳೆ ಇದ್ದಂತಿಲ್ಲ. ಆದರೂ, ಅಧಿಕಾರಿಗಳು ರಸ್ತೆ ದುರಸ್ತಿಗೆ ಮಳೆ ನೆಪ ಹೇಳುತ್ತಿದ್ದಾರೆ. ಇವರಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದು ನ್ಯಾಯಾಲಯಕ್ಕೆ ಗೊತ್ತಿದೆ. ವೇತನ ತಡೆ ಹಿಡಿದರೆ ಆಗ ಗೊತ್ತಾಗುತ್ತದೆ ಎಂದು ಪೀಠ ಚಾಟಿ ಬೀಸಿತು.

ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕೆಂದು ನಮಗೆ ಗೊತ್ತಿದೆ
ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕೆಂದು ನಮಗೆ ಗೊತ್ತಿದೆ

By

Published : Nov 11, 2021, 10:38 PM IST

ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ರಸ್ತೆಗಳನ್ನು ದುರಸ್ತಿ ಮಾಡುವ ಮತ್ತು ಗುಂಡಿಗಳನ್ನು ಮುಚ್ಚುವ ವಿಚಾರದಲ್ಲಿ ಪದೇ ಪದೇ ಕಾರಣಗಳನ್ನು ಹೇಳುತ್ತಿರುವ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಅಧಿಕಾರಿಗಳು ಸರ್ಕಾರದ ಮಾತು ಕೇಳದಿದ್ದರೆ, ಹೇಗೆ ಕೆಲಸ ಮಾಡಿಸಬೇಕು ಎಂಬುದನ್ನು ನಾವೇ ಹೇಳಿಕೊಡುತ್ತೇವೆ ಎಂದು ಚಾಟಿ ಬೀಸಿದೆ.

ಬೀದರ್ ಜಿಲ್ಲೆಯಲ್ಲಿ ರಸ್ತೆ ದುರಸ್ತಿ ಮಾಡಲು ಮತ್ತು ಗುಂಡಿಗಳನ್ನು ಮುಚ್ಚಲು ಸರ್ಕಾರಕ್ಕೆ ನಿರ್ದೇಶನ ಕೋರಿ ಗುರುನಾಥ ವಡ್ಡೆ ಎಂಬುವರು ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಮಾನ್ಸೂನ್ ಮಳೆ ಕಾರಣಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಮಳೆಗಾಲ ಮುಗಿದ ಮೇಲೆ ರಸ್ತೆ ಗುಂಡಿ ಮುಚ್ಚಲಾಗುವುದು ಎಂದರು.ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, 2019ರಲ್ಲಿ ಅರ್ಜಿ ಸಲ್ಲಿಸಲಾಗಿದೆ. ನಾಲ್ಕು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು 2021ರ ಸೆ.20ರಂದು ಸರ್ಕಾರ ಭರವಸೆ ನೀಡಿದೆ.

ಈಗಲೂ ಕಾಲಾವಕಾಶ ಕೇಳಿತ್ತಿದ್ದೀರಿ. ಇಡೀ ಜಿಲ್ಲೆಯ ರಸ್ತೆಗಳು ದುಸ್ಥಿತಿಯಲ್ಲಿವೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ. ಇವೆಲ್ಲ ನೋಡಿದರೆ, ಅಧಿಕಾರಿಗಳು ಸರ್ಕಾರದ ಮಾತು ಕೇಳುತ್ತಿಲ್ಲ ಎನ್ನಿಸುತ್ತದೆ. ಸದ್ಯಕ್ಕೆ ಬೆಂಗಳೂರಲ್ಲಿ ಬಿಟ್ಟು ರಾಜ್ಯದ ಬೇರೆಲ್ಲೂ ಮಳೆ ಇದ್ದಂತಿಲ್ಲ. ಆದರೂ, ಅಧಿಕಾರಿಗಳು ರಸ್ತೆ ದುರಸ್ತಿಗೆ ಮಳೆ ನೆಪ ಹೇಳುತ್ತಿದ್ದಾರೆ. ಇವರಿಂದ ಹೇಗೆ ಕೆಲಸ ಮಾಡಿಸಬೇಕು ಎಂಬು ನ್ಯಾಯಾಲಯಕ್ಕೆ ಗೊತ್ತಿದೆ. ವೇತನ ತಡೆ ಹಿಡಿದರೆ ಆಗ ಗೊತ್ತಾಗುತ್ತದೆ ಎಂದು ಪೀಠ ಚಾಟಿ ಬೀಸಿತು.

ರಸ್ತೆ ಸಮಸ್ಯೆ ಕಾರಣಕ್ಕೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿ ಅನಾಹುತಗಳಾದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಜಿಲ್ಲೆಯ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಶೀಘ್ರವಾಗಿ ನಡೆಯಬೇಕು. ಇಲ್ಲದಿದ್ದರೆ, ಮುಂದಿನ ವಿಚಾರಣೆ ವೇಳೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ಇಂಜಿನಿಯರ್ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು 2022ರ ಜ.18ಕ್ಕೆ ಮುಂದೂಡಿತು.

ABOUT THE AUTHOR

...view details