ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನ ಡಿಸಿಎಂ ಸಚಿನ್ ಪೈಲಟ್ ಬಿಜೆಪಿಗೆ ಬರುವುದಾದರೆ ಅವರ ನಿರ್ಧಾರವನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಸಚಿನ್ ಪೈಲಟ್ ಬಿಜೆಪಿ ಸೇರುವುದಾದರೆ ಸ್ವಾಗತಿಸುತ್ತೇನೆ: ಸುಧಾಕರ್ - ಸಚಿನ್ ಪೈಲಟ್ ಬಿಜೆಪಿ ಸೇರುವುದಾದರೆ ಸ್ವಾಗತಿಸುತ್ತೇನೆ
ರಾಜಸ್ಥಾನ ಕಾಂಗ್ರೆಸ್ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದ್ದು, ಡಿಸಿಎಂ ಸಚಿನ್ ಪೈಲಟ್ ಪಕ್ಷದಿಂದ ಹೊರ ಹೋಗಲು ಚಿಂತನೆ ನಡೆಸಿದ್ದಾರೆ. ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿ, ಬಿಜೆಪಿಗೆ ಬರುವುದಾದರೆ ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಸುಧಾಕರ್
ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಮನ್ನಣೆ ಸಿಕ್ಕುವುದಿಲ್ಲ. ಅದನ್ನು ಗುರುತಿಸುವುದೂ ಇಲ್ಲ. ನಿಜವಾದ ನಾಯಕರ ಸಾಮರ್ಥ್ಯವನ್ನು ಗುರುತಿಸುವ ಹಾಗೂ ಅದಕ್ಕೆ ತಕ್ಕ ಪ್ರತಿಫಲ ಕೊಡುವ ಬದ್ಧತೆ ಇರುವ ಪಕ್ಷ ಬಿಜೆಪಿ ಮಾತ್ರ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದ್ದು, ಡಿಸಿಎಂ ಸಚಿನ್ ಪೈಲಟ್ ಪಕ್ಷದಿಂದ ಹೊರ ಹೋಗಲು ಚಿಂತನೆ ನಡೆಸಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.