ಬೆಂಗಳೂರು: ಹೊಸಗುಡ್ಡದಹಳ್ಳಿ ಬಳಿಯ ರೇಖಾ ಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಮಾಜಿ ಸಚಿವ ಎಂ ಕೃಷ್ಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿ ಕೆಮಿಕಲ್ ಪ್ಯಾಕ್ಟರಿ ಗೋಡನ್ಗೆ ಬಿಬಿಎಂಪಿಯು ಟ್ರೇಡ್ ಲೈಸೆನ್ಸ್ ಕೊಟ್ಟಿರುವುದಿಲ್ಲ ಎಂದು ತಿಳಿದು ಬಂದಿದೆ. ಹಾಗಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತನಿಖೆ ಕೈಗೊಳ್ಳಲಾಗುತ್ತೆ. ಜೊತೆಗೆ ತಲೆಮರೆಸಿಕೊಂಡಿರುವ ಗೋಡೌನ್ ಮಾಲೀಕ ಎಲ್ಲಿದ್ದಾರೆ ಎಂದು ಪರಿಶೀಲನೆ ಮಾಡಲಿದ್ದೇವೆ ಎಂದರು.
ಇನ್ನೂ ಹೊಸಗುಡ್ಡದಹಳ್ಳಿಯಲ್ಲಿ ಇರುವ ಎಲ್ಲ ಇಂಡಸ್ಟ್ರಿಸ್ ಮಾಲೀಕರ ಬಳಿ ಲೈಸನ್ಸ್ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.