ಕರ್ನಾಟಕ

karnataka

ETV Bharat / state

ಲಾಕ್​ಡೌನ್ ಮುಂದುವರಿಕೆ ಕುರಿತು ಜೂನ್ 5ಕ್ಕೆ ನಿರ್ಧಾರ..! - ಸಿಎಂ ಯಡಿಯೂರಪ್ಪ ಸಭೆ

ಹಳ್ಳಿಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದು, ಲಾಕ್​ಡೌನ್​ ವಿಸ್ತರಣೆ ಬಗ್ಗೆ ಇದೇ ಜೂನ್​ 5 ರಂದು ಸಭೆ ಸೇರಿ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

cm
cm

By

Published : Jun 2, 2021, 8:38 PM IST

ಬೆಂಗಳೂರು: ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದು, ಕೇಂದ್ರದ ಮಾರ್ಗಸೂಚಿ ಪಾಲಿಸುವಂತೆ ತಿಳಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಕೋವಿಡ್ -19 ನಿಯಂತ್ರಣದ ಕುರಿತು ಚರ್ಚೆ ನಡೆಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಿಎಂ ಪರಾಮರ್ಶೆ ನಡೆಸಿದರು.

ಆಕ್ಸಿಜನ್ ಎಲ್ಲಿ ಹೆಚ್ಚಾಗಿದೆ ಎಲ್ಲಿ‌ ಕಡಿಮೆ ಬೇಡಿಕೆ ಇದೆ ಅನ್ನೋದರ ಬಗ್ಗೆ ನಿಗಾ ಇಟ್ಟು ಆಕ್ಸಿಜನ್ ಜಿಲ್ಲಾವಾರು ಹಂಚಿಕೆ ಬಗ್ಗೆ ನಿಗಾ ವಹಿಸಬೇಕು, ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣ ಬಗ್ಗೆ ಹೆಚ್ಚು ಗಮನ ಹರಿಸಬೇಕು, ಬ್ಯ್ಲಾಕ್​​ ಫಂಗಸ್ ಹೆಚ್ಚಾಗಿದ್ದು, ಅದನ್ನು‌ ನಿಯಂತ್ರಿಸಲು‌ ಕ್ರಮ ವಹಿಸಬೇಕು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕೊರೊನಾ ಸೋಂಕು ನಿಯಂತ್ರಿಸಲು ಸೂಕ್ತ ಕ್ರಮ ವಹಿಸಲು ಸಿಎಂ ಸೂಚಿಸಿದರು.

ಲಾಕ್​ಡೌನ್ ಮುಂದುವರಿಕೆ, ಅನ್ ಲಾಕ್ ಪ್ರಕ್ರಿಯೆ ಕುರಿತು ಇಂದಿನ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಜೂನ್ 5 ರಂದು ಮತ್ತೆ ಸಭೆ ನಡೆಸಲಿದ್ದು, ಅಂದಿನ ಸಭೆಯಲ್ಲಿ ಲಾಕ್ ಡೌನ್ ಮುಂದುವರಿಕೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ.

ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ್, ಸಚಿವರಾದ ಜಗದೀಶ್ ಶೆಟ್ಟರ್,ಅರವಿಂದ ಲಿಂಬಾವಳಿ, ಸುರೇಶ್ ಕುಮಾರ್, ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.

ABOUT THE AUTHOR

...view details