ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಸಂಬಂಧ ಅರುಣ್ ಸಿಂಗ್ ಜೊತೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತಮಾಡಿದ ಅವರು, ಇವತ್ತು ಶಿವಮೊಗ್ಗದಲ್ಲಿ ಕೋರ್ ಕಮಿಟಿ, ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ. ಎರಡು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಳೆ ವಾಪಸ್ ಬರುತ್ತೇವೆ ಎಂದರು.