ಕರ್ನಾಟಕ

karnataka

ETV Bharat / state

ಜೇಮ್ಸ್ ಚಿತ್ರದ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ: ಸಿಎಂ ಬೊಮ್ಮಾಯಿ - ಜೇಮ್ಸ್ ಚಿತ್ರದ ಸಮಸ್ಯೆ ಕುರಿತಂತೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಪುನೀತ್​ ರಾಜ್​ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್​​ ಬಗ್ಗೆ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸುವ ಭರವಸೆಯನ್ನು ಸಿಎಂ ಬೊಮ್ಮಾಯಿ ನೀಡಿದ್ದಾರೆ.

CM Bommai reaction on James movie problem
ಜೇಮ್ಸ್ ಚಿತ್ರದ ಬಗ್ಗೆ ಏನೆ ಸಮಸ್ಯೆ ಬಂದ್ರ ಪರಿಹಾರದ ಭರವಸೆ ನೀಡಿದ ಸಿಎಂ ಬೊಮ್ಮಾಯಿ

By

Published : Mar 24, 2022, 12:42 PM IST

Updated : Mar 24, 2022, 1:49 PM IST

ಬೆಂಗಳೂರು:ಜೇಮ್ಸ್ ಚಿತ್ರದ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ‌ಮಾತನಾಡಿದ ಅವರು, ನಟ ಶಿವರಾಜ್ ಕುಮಾರ್ ದಂಪತಿ ಇಂದು ಭೇಟಿಯಾಗಿ ಏಪ್ರಿಲ್ ಎರಡನೇ ವಾರದಲ್ಲಿ ಶಕ್ತಿಧಾಮ‌ ಕಟ್ಟಡಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ. ಈ ವೇಳೆ ಜೇಮ್ಸ್ ಚಿತ್ರದ ಬಗ್ಗೆ ವಿಶೇಷವಾದ ಚರ್ಚೆ ನಡೆದಿಲ್ಲ ಎಂದರು.

ಸಿಎಂ ಬೊಮ್ಮಾಯಿ

ಸಿನಿಮಾಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ತೊಂದರೆ‌ ಇದ್ದರೆ ಚಲನಚಿತ್ರ ವಾಣಿಜ್ಯ ಮಂಡಳಿ ಸಂಪರ್ಕಿಸಿ ಎಂದು ಹೇಳಿದ್ದೇನೆ.‌ ಈ ಬಗ್ಗೆ ಜೇಮ್ಸ್ ನಿರ್ಮಾಪಕರಿಗೆ ತಿಳಿಸಿದ್ದೇನೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಆ ವ್ಯವಸ್ಥೆ ಇದ್ದು, ಅಲ್ಲಿ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸಲಾಗುವುದು. ಈಗಾಗಲೇ ಚೇಂಬರ್ ಜೊತೆ ನಾನೂ ಮಾತನಾಡಿದ್ದೇನೆ. ಇನ್ನೊಮ್ಮೆ ಬೇಕಾದರೆ ಮಾತನಾಡುತ್ತೇನೆ. ಏನೇ ಸಮಸ್ಯೆ ಇದ್ದರೂ ಬಗೆಹರಿಸಲಾಗುತ್ತದೆ ಎಂದರು.

ಇದನ್ನೂ ಓದಿ: ‘ಯಾರಿಗೇಳೋಣಾ ನಮ್ಮ ಪ್ರಾಬ್ಲಂ’..ಸಚಿವ ಸ್ಥಾನದ ಆಫರ್..? ಕಾಂಗ್ರೆಸ್ ತೊರೆಯುವ ವಿಚಾರದಲ್ಲಿ ಇಬ್ರಾಹಿಂ ಗೊಂದಲ!

Last Updated : Mar 24, 2022, 1:49 PM IST

For All Latest Updates

TAGGED:

ABOUT THE AUTHOR

...view details