ಬೆಂಗಳೂರು:ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಪ್ರವಾಸಕ್ಕೆ ತೆರಳುವ ಮುನ್ನ ಆರ್.ಟಿ ನಗರ ನಿವಾಸದಲ್ಲಿ ಮಾತನಾಡಿದ ಅವರು, ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಮತಎಣಿಕೆ ಆರಂಭವಾಗಿದೆ. ಈಗಲೇ ಅದರ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಇನ್ನೊಂದೆರಡು ಗಂಟೆ ಕಳೆದ ಮೇಲೆ ಸ್ಪಷ್ಟ ಚಿತ್ರಣ ಸಿಗಬಹುದು. ಆದರೆ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.