ಕರ್ನಾಟಕ

karnataka

ETV Bharat / state

ಮುಂದಿನ 2 ದಿನ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

By

Published : May 15, 2023, 4:31 PM IST

ಹವಾಮಾನ ಇಲಾಖೆ
ಹವಾಮಾನ ಇಲಾಖೆ

ಬೆಂಗಳೂರು : ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ. ನಿನ್ನೆ ಪುತ್ತೂರು, ಕುಂದಾಪುರ, ಮಾಣಿ, ಕಾರ್ಕಳ, ಭಾಗಮಂಡಲ, ಕೋಟ, ಪಣಂಬೂರು, ಹುಣಸೂರು, ತುಮಕೂರಿನಲ್ಲಿ ಮಳೆಯಾಗಿದೆ.

ಇದನ್ನೂ ಓದಿ :ರಾಜ್ಯದಲ್ಲಿ ಮುಂದಿನ 5 ದಿನ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್​.. ಹವಾಮಾನ ಇಲಾಖೆ ಮುನ್ಸೂಚನೆ

ಮಳೆಯ ಜೊತೆಗೆ ಬೇಸಿಗೆ ತಾಪಮಾನ ಕೂಡಾ ಹೆಚ್ಚಾಗಿದ್ದು, ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ :ದಕ್ಷಿಣ ಒಳನಾಡಿನಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಎಚ್‌ಎಎಲ್‌ನಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 32.6 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ, ನಗರದಲ್ಲಿ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್‌ 33.3 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮೋಚಾ ಚಂಡಮಾರುತ ದಿಂದಾಗಿ ಭಾರಿ ಮಳೆ:ಬಂಗಾಳಕೊಲ್ಲಿಯಲ್ಲಿಮೋಚಾ ಚಂಡಮಾರುತ ಉಂಟಾಗಿರುವ ಹಿನ್ನೆಲೆಯಲ್ಲಿ(ಮೇ 12) ರಂದು ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಆಗುವ ಎಚ್ಚರಿಕೆ ನೀಡಿತ್ತು. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇರತ್ತದೆ. ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 30-40 ಕಿ. ಮೀ ಇರುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಮಾಹಿತಿ ನೀಡಿತ್ತು.

ಇದನ್ನೂ ಓದಿ :ರಾಜ್ಯಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಮಳೆ: ಕೆಲವೆಡೆ ಯೆಲ್ಲೋ ಅಲರ್ಟ್‌ ಘೋಷಣೆ

ABOUT THE AUTHOR

...view details