ಕರ್ನಾಟಕ

karnataka

ರಾಜ್ಯದಲ್ಲಿ ತಗ್ಗಿದ ಮಳೆ: ಕರಾವಳಿ ಜಿಲ್ಲೆಗಳ ಕೆಲವು ಕಡೆ ಮಾತ್ರ ಯೆಲ್ಲೋ ಅಲರ್ಟ್

By

Published : Aug 19, 2020, 4:32 PM IST

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19ರಿಂದ 23ರವರೆಗೆ ಹಗುರದಿಂದ ಸಾಧಾರಣವಾಗಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ತಿಳಿಸಿದರು.

weather
weather

ಬೆಂಗಳೂರು:ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಆಗುಂಬೆಯಲ್ಲಿ 12 ಸೆಂ.ಮೀ, ಮೂಡಬಿದ್ರೆಯಲ್ಲಿ 6 ಸೆಂ.ಮೀ, ಪಣಂಬೂರಿನಲ್ಲಿ 4 ಸೆಂ.ಮೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19ರಿಂದ 23ರವರೆಗೆ ಹಗುರದಿಂದ ಸಾಧಾರಣವಾಗಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 19, 20, ಹಾಗೂ 23ರಿಂದ ಕೆಲವು ಕಡೆ ಭಾರೀ ಮಳೆ ನಿರೀಕ್ಷಿಸಿರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ತಿಳಿಸಿದರು.

ಕರಾವಳಿ ಜಿಲ್ಲೆಗಳ ಕೆಲವು ಕಡೆ ಎಲ್ಲೋ ಅಲರ್ಟ್

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರಿಂದ 23ರವರೆಗೆ ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗಬಹುದು. ಬೆಂಗಳೂರಿನಲ್ಲಿ ಆಗಸ್ಟ್ 23 ಹಾಗೂ 24ರಂದು ಕೆಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದರು.

ABOUT THE AUTHOR

...view details