ಕರ್ನಾಟಕ

karnataka

ETV Bharat / state

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರೀ ಮಳೆ: ಹೈ ಅಲರ್ಟ್ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Weather report
ಹವಾಮಾನ ವರದಿ

By

Published : Sep 6, 2021, 5:40 PM IST

ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ದಕ್ಷಿಣ ಒಡಿಶಾ ಮತ್ತು ಉತ್ತರ ಆಂಧ್ರಪ್ರದೇಶದ ವಾಯುವ್ಯ ಭಾಗದಲ್ಲಿನ ಪರಿಣಾಮ ರಾಜ್ಯದಲ್ಲಿ ಇಂದು ಭಾರೀ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಸೆ.6 ಮತ್ತು 7 ರಂದು ಭಾರೀ ಮಳೆ ಬೀಳುವ ನಿರೀಕ್ಷೆಯಿಂದ ಆರೆಂಜ್​​ ಅಲರ್ಟ್ ನೀಡಲಾಗಿದೆ. 8 ಮತ್ತು 9 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಕೆಲವು ಕಡೆ ಅಧಿಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್​​ ಅಲರ್ಟ್ ನೀಡಿದೆ.

ಬೆಳಗಾವಿ, ಬೀದರ್, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ 6 ಮತ್ತು 7 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಇಂದು ಭಾರಿ ಮಳೆಯಾಗುವ ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೋಮವಾರದ ಪ್ರಮುಖಾಂಶ:

ಮುಂಗಾರು ರಾಜ್ಯದೆಲ್ಲೆಡೆ ಚುರುಕಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಎಲ್ಲಾ ಕಡೆ ಮಳೆಯಾಗಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಮುಖ್ಯವಾಗಿ ಕಂಪ್ಲಿಯಲ್ಲಿ 9 ಸೆಂ.ಮೀ, ಮುಲ್ಕಿ 8 ಸೆಂ.ಮೀ, ಕದ್ರಾ, ಕುಕನೂರು, ಸಂತೆಹಳ್ಳಿಯಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಮಳೆ:

ರಾಜ್ಯಾದ್ಯಂತ ಮುಂದಿನ 24 ಗಂಟೆಗಳಲ್ಲಿ ಬಹುತೇಕ ಕಡೆ ಮಳೆ ನಿರೀಕ್ಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಹೆಚ್ಚಿನ ನಿರೀಕ್ಷೆ ಇದೆ.

ಮೀನುಗಾರರಿಗೆ ಮುನ್ನೆಚ್ಚರಿಕೆ:

ಕರಾವಳಿಯುದ್ದಕ್ಕೂ ಮತ್ತು ಕರಾವಳಿಯನ್ನು ಭೇದಿಸಿ ಗಾಳಿ 40 ರಿಂದ 50 ಕಿ.ಮೀ ಗಂಟೆಗೆ ಬೀಸುವ ನಿರೀಕ್ಷೆ ಇದೆ. ಹಾಗಾಗಿ ಈ ಪ್ರದೇಶಗಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ರಾಜಧಾನಿಯಲ್ಲಿ ಮಳೆ:

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 28 ಡಿಗ್ರಿ, ಕನಿಷ್ಠ 20 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಓದಿ: ವಿಜಯಪುರ ಜಿಲ್ಲೆ ಸಚಿವ ಸ್ಥಾನ ನೀಡದಿದ್ದರೆ ಬಿಜೆಪಿ ಪಕ್ಷ ಹಾಳಾಗಲಿದೆ : ಯತ್ನಾಳ್​ ಭವಿಷ್ಯ

ABOUT THE AUTHOR

...view details