ಕರ್ನಾಟಕ

karnataka

ETV Bharat / state

ನವೆಂಬರ್ 1 & 2ರಂದು ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ - ಯೆಲ್ಲೋ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮತ್ತೊಮ್ಮೆ ಮಳೆ ಅಬ್ಬರಿಸುವ ಸಾಧ್ಯತೆ ದಟ್ಟವಾಗಿದೆ.

Heavy rain in karnataka
Heavy rain in karnataka

By

Published : Oct 31, 2021, 12:24 AM IST

ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನವೆಂಬರ್ 1 ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜ ನಗರದಲ್ಲಿ ನವೆಂಬರ್ 1 ಮತ್ತು 2 ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಆಗಾಗ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿರಿ:ಅಪ್ಪು ಅಗಲಿಕೆಗೆ ಸಂತಾಪ ಸೂಚಿಸಿದ ವಿಜಯ್​ ದೇವರಕೊಂಡ... ಅವರ ಸಾವು ನಂಬೋಕೆ ಆಗ್ತಿಲ್ಲ ಎಂದ ನಟ

ನಿರಂತರ ಮಳೆಯಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಕೇರಳದಲ್ಲಿ ಮತ್ತೆ ವರುಣ ದೇವ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ABOUT THE AUTHOR

...view details