ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದೂ ಸೇರಿದಂತೆ ಏಪ್ರಿಲ್ 6 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಕರಾವಳಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ:ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಕೂಡ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ನಾಲ್ಕು ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ಗುಡುಗು ಸಹಿತ ಮಳೆ:ಏಪ್ರಿಲ್ 5 ಹಾಗೂ 6ರಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ:ನಾನು ಬಿಜೆಪಿ ಸೇರುವುದು ಖಚಿತ, ಈಗಾಗಲೇ ವರಿಷ್ಠರ ಜೊತೆ ಮಾತುಕತೆಯಾಗಿದೆ: ಹೊರಟ್ಟಿ