ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ: ಕರಾವಳಿಗೆ ರೆಡ್​ ಅಲರ್ಟ್​ ಘೋಷಣೆ - Etv bharat kannada

ರಾಜ್ಯದಲ್ಲಿ ಇಂದಿನಿಂದ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

heavy rain alert of Karnataka
heavy rain alert of Karnataka

By

Published : Sep 8, 2022, 10:32 AM IST

ಬೆಂಗಳೂರು:ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಜೋರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು ಇಲಾಖೆ ರೆಡ್​​ ಅಲರ್ಟ್​ ಘೋಷಿಸಿದೆ.

ಬೆಂಗಳೂರಿಗೆ ಯೆಲ್ಲೋ ಅಲರ್ಟ್‌: ಕಳೆದ ಕೆಲವು ದಿನಗಳಿಂದ ಸುರಿದ ಮಹಾಮಳೆಗೆ ಬೆಂಗಳೂರು ತತ್ತರಿಸಿದೆ. ಇದೀಗ ಮತ್ತೆ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ:ರಾಜಧಾನಿಯಲ್ಲಿ ರಣ ಮಳೆ: ಕೆರೆಗಳು ಫುಲ್; ಮುಂದುವರಿದ ಜನರ ಪರದಾಟ

ಇನ್ನುಳಿದಂತೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು ಹಾಗು ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ಭಾರಿ ಮಳೆಯಾಗಲಿದೆ.

ABOUT THE AUTHOR

...view details